ಬ್ರೇಕಿಂಗ್ ನ್ಯೂಸ್
06-04-21 04:13 pm Mangalore Correspondent ಕರಾವಳಿ
ಮಂಗಳೂರು, ಎ.6: ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಂ ಶಂಕರ್ ನಡೆಸಿರುವ ರಹಸ್ಯ ಕಾರ್ಯಾಚರಣೆಯಲ್ಲಿ ಉಳ್ಳಾಲದ ಕುಂಪಲದಲ್ಲಿರುವ ನೂರಾನಿ ಯತೀಂಖಾನದಲ್ಲಿ ಮೇಲ್ವಿಚಾರಕನಾಗಿದ್ದ ಉಸ್ತಾದ್ ಸಿಕ್ಕಿಬಿದ್ದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಕೊಣಾಜೆ ನಿವಾಸಿಯಾಗಿರುವ ಅಯೂಬ್ (52) ನನ್ನು ಪೊಲೀಸರು ಬಂಧಿಸಿದ್ದಾರೆ.
ಚೈಲ್ಡ್ ಕೇರ್ ಸೆಂಟರಿನಲ್ಲಿ ಮಕ್ಕಳಿಗೆ ಲೈಂಗಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂಬ ಮಾಹಿತಿಯಡಿ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಇದಕ್ಕಾಗಿ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ಮತ್ತು ರೋಶನಿ ನಿಲಯ ಸಮಾಜ ಕಾರ್ಯ ವಿಭಾಗದ ಪ್ರಾಧ್ಯಾಪಕರಿಂದ ನಗರದ ಟಿಎಂಎ ಪೈ ಕನ್ವೆನ್ಶನ್ ಹಾಲ್ ನಲ್ಲಿ ಕಾರ್ಯಾಗಾರ ನಡೆಸಲಾಗಿತ್ತು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 30ಕ್ಕೂ ಅಧಿಕ ಮಕ್ಕಳ ಅನಾಥಾಶ್ರಮಗಳಿಂದ 480ಕ್ಕೂ ಮಕ್ಕಳು ಭಾಗವಹಿಸಿದ್ದರು.
ಕಾರ್ಯಾಗಾರದಲ್ಲಿ ಮಕ್ಕಳನ್ನು ಖುದ್ದಾಗಿ ವೈದ್ಯರು ತಪಾಸಣೆಗೆ ಒಳಪಡಿಸಿದ್ದಾರೆ. ಅಲ್ಲದೆ, ಮಕ್ಕಳಲ್ಲಿ ಕೆಟ್ಟ ಅಭ್ಯಾಸಗಳು, ಒಳ್ಳೆಯ ನಡತೆಗಳು ಇತ್ಯಾದಿ ವಿಚಾರದಲ್ಲಿ ಅರಿವು ಶಿಬಿರ ನಡೆಸಲಾಗಿದೆ. ಬಳಿಕ ಮಕ್ಕಳನ್ನು ವಿಶ್ವಾಸಕ್ಕೆ ಪಡೆದು ಪ್ರಶ್ನೆ ಮಾಡಿದಾಗ, ಅಲ್ಲಿ ಕಿರುಕುಳ ಆಗುತ್ತಿರುವ ವಿಚಾರ ಬಾಯಿಬಿಟ್ಟಿದ್ದಾರೆ. ಬಳಿಕ ರೋಶನಿ ನಿಲಯದ ಉಪನ್ಯಾಸಕರ ಮೂಲಕ ಪ್ರಶ್ನಾವಳಿ ತಯಾರಿಸಿ ಅವುಗಳಿಗೆ ಉತ್ತರಿಸಲು ನೀಡಲಾಗಿತ್ತು. ಈ ವೇಳೆ, ತಮಗಾದ ನೋವು ಮತ್ತು ಕಿರುಕುಳವನ್ನು ಅವರು ಹೇಳಿಕೊಂಡಿದ್ದಾರೆ.
ಉಳ್ಳಾಲದ ಕುಂಪಲದಲ್ಲಿರುವ ಯತೀಂಖಾನದಲ್ಲಿ 79 ಮಕ್ಕಳಿದ್ದಾರೆ. ಆ ಪೈಕಿ 51 ಮಂದಿ 6ನೇ ಕ್ಲಾಸ್ ಮೇಲಿನವರಾಗಿದ್ದು ಶಾಲೆಗೆ ಹೋಗುತ್ತಿದ್ದಾರೆ. ಈ ಪೈಕಿ, 12 ವರ್ಷದ ಬಾಲಕನೊಬ್ಬ ತನಗೆ ಲೈಂಗಿಕ ಕಿರುಕುಳ ಆಗುತ್ತಿರುವ ಬಗ್ಗೆ ಹೇಳಿಕೊಂಡಿದ್ದಾನೆ. ಆತನನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದಾಗ, ನಿಗಾ ಕೇಂದ್ರದಲ್ಲಿ ಮೇಲ್ವಿಚಾರಕನಾಗಿರುವ ಅಯೂಬ್ ಹೆಸರು ಹೊರಗೆ ಬಂದಿದೆ. ಇದೇ ವ್ಯಕ್ತಿಯಿಂದ ಇತರೇ ನಾಲ್ಕು ಮಕ್ಕಳು ಕೂಡ ಕಿರುಕುಳಕ್ಕೆ ಒಳಗಾಗಿದ್ದಾರೆ. ಈ ಕೇಂದ್ರದಲ್ಲಿ ಗಂಡು ಮಕ್ಕಳು ಮಾತ್ರ ಇದ್ದು, ಆರೋಪಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ತಿಳಿದುಬಂದಿದೆ. ಆ ಹುಡುಗ ನಾಲ್ಕು ವರ್ಷಗಳಿಂದ ಈ ಕೇಂದ್ರದಲ್ಲಿದ್ದು ತಂದೆ, ತಾಯಿ ಇಲ್ಲದ ಕಾರಣ ಇಲ್ಲಿ ಉಳಿದುಕೊಂಡಿದ್ದ ಎಂದು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಏಕ್ಟಿನಡಿ ಪ್ರಕರಣ ದಾಖಲಿಸಲಾಗಿದೆ. ಇಡೀ ಪ್ರಕರಣವನ್ನು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಇನ್ನೂ ಕೆಲವು ನಿಗಾ ಕೇಂದ್ರಗಳ ಮಕ್ಕಳು ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಮಕ್ಕಳು ನೇರವಾಗಿ ಹೇಳಿಕೊಳ್ಳದ ಹೊರತು ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಲ್ಲ. ಚೆನ್ನೈ ಸೇರಿದಂತೆ ದೇಶದ ಮಹಾನಗರಗಳಲ್ಲಿ ಈ ರೀತಿ ಮಕ್ಕಳನ್ನು ಶಿಬಿರದಲ್ಲಿ ಪಾಲ್ಗೊಳ್ಳುವಂತೆ ಮಾಡಿಸಿ, ಕಿರುಕುಳದ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಕಮಿಷನರ್ ಮಾಹಿತಿ ನೀಡಿದರು.
Read: ಚೈಲ್ಡ್ ಕೇರ್ ಸೆಂಟರಲ್ಲೇ ಮಕ್ಕಳಿಗೆ ಲೈಂಗಿಕ ಕಿರುಕುಳ !! ಪೊಲೀಸ್ ಸ್ಟಿಂಗಲ್ಲಿ ಸಿಕ್ಕಿಬಿದ್ದ ಉಸ್ತಾದ್ !!
Video:
The Mangalore City Police Commissioner Shashi Kumar and his team have succeeded in arresting a person who was involved in Sexual Abuse and Harassment of children in Child Care centres in Mangalore.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm