ಬ್ರೇಕಿಂಗ್ ನ್ಯೂಸ್
07-04-21 05:52 pm Mangalore Correspondent ಕರಾವಳಿ
ಉಪ್ಪಿನಂಗಡಿ, ಎ.7 ; ಪಬ್ ಜಿ ಗೇಮ್ ಮಕ್ಕಳ ಮೇಲೆ ಯಾವ ರೀತಿ ಆವರಿಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಇಲ್ಲೊಬ್ಬ ಶಾಲಾ ಬಾಲಕ ಫ್ರೀ ಫಯರ್ ಗೇಮ್ ಆಡಿಕೊಂಡು ತಲೆ ಕೂದಲನ್ನು ವಿಚಿತ್ರವಾಗಿ ಕತ್ತರಿಸಿಕೊಂಡಿದ್ದಾನೆ.
ಇತ್ತೀಚೆಗೆ ಮಂಗಳೂರಿನಲ್ಲಿ ಪಬ್ ಜಿ ಗೇಮ್ ಆಟದ ಸೇಡಿನಲ್ಲಿ ಬಾಲಕನ ಕೊಲೆಯೇ ನಡೆದಿತ್ತು. ಇದೀಗ ಉಪ್ಪಿನಂಗಡಿಯ ಖಾಸಗಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಫ್ರೀ ಫಯರ್ ಗೇಮ್ನ ಟಾಸ್ಕ್ ಉದ್ದೇಶಕ್ಕೆ ತನ್ನ ತಲೆ ಕೂದಲನ್ನೇ ವಿಕಾರವಾಗಿ ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ತಲೆ ಕೂದಲನ್ನು ವಿಕಾರವಾಗಿ ಕತ್ತರಿಸಿರುವುದನ್ನು ಗಮನಿಸಿದ ಹೆತ್ತವರು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಸುಳ್ಳು ಕತೆ ಕಟ್ಟಿ, ತನ್ನ ಗೆಳೆಯರು ಹೇಳಿದಕ್ಕಾಗಿ ಹೀಗೆ ಕೂದಲು ಕತ್ತರಿಸಿದ್ದಾಗಿ ಹೇಳಿದ್ದ.
ಹೆತ್ತವರು ಮತ್ತಷ್ಟು ವಿಚಾರಿಸಿದಾಗ ಕೊನೆಗೆ ಸತ್ಯ ಬಾಯ್ಬಿಟ್ಟಿದ್ದಾನೆ. ತಾನು ಫ್ರೀ ಪೈಯರ್ ಆನ್‌ಲೈನ್ ಆಟದಲ್ಲಿ ಬರುವ ಟಾಸ್ಕ್ ಒಂದರಂತೆ ಮೊಬೈಲ್ ಮುಂಭಾಗದಲ್ಲಿ ತಲೆ ಕೂದಲು ಕತ್ತರಿಸಿಕೊಂಡಿದ್ದಾಗಿ ತಿಳಿಸಿದ್ದಾನೆ.
ವಿದ್ಯಾರ್ಥಿಯ ಕೃತ್ಯದಿಂದ ಕಂಗಾಲಾದ ಪೋಷಕರು, ಪೊಲೀಸರ ಗಮನಕ್ಕೆ ತಂದಿದ್ದರು. ಈ ವೇಳೆ ಇದೇ ಆಟದಲ್ಲಿ ಇನ್ನೂ ಕೆಲವು ಸಹಪಾಠಿ ಮಕ್ಕಳು ಭಾಗಿಯಾಗಿರುವುದು ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪ್ಪಿನಂಗಡಿ ಪೊಲೀಸರು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಮಾಡಿ ಆನ್ಲೈನ್ ಆಟಗಳ ಬಗ್ಗೆ ನಿಗಾ ಇರಿಸಲು ಮುಂದಾಗಿದ್ದಾರೆ. ಜೊತೆಗೆ ಪೋಷಕರು ಮಕ್ಕಳಿಗೆ ಆನ್ಲೈನ್ ತರಗತಿ ನೆಪದಲ್ಲಿ ಮೊಬೈಲ್ ನೀಡುವುದಕ್ಕೆ ನಿರ್ಬಂಧ ವಿಧಿಸಿ, ಮಕ್ಕಳ ಮೇಲೆ ನಿಗಾ ಇಡುವಂತೆ ಸೂಚಿಸಿದ್ದಾರೆ.
Uppinangady Pubg game free fire addiction boy accepts the task for a scary hair cut. Police have warned the parents and boy in connection to this.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm