ಬ್ರೇಕಿಂಗ್ ನ್ಯೂಸ್
09-04-21 03:52 pm Mangalore Correspondent ಕರಾವಳಿ
ಉಳ್ಳಾಲ, ಎ.9 : ತ್ರಿಬಲ್ ರೈಡ್ ನಲ್ಲಿದ್ದ ಯುವಕರ ಬೈಕೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ಕುತ್ತಾರು ಪದವಿನ ಕೊರಗಜ್ಜನ ಕಟ್ಟೆ ಬಳಿ ನಡೆದಿದೆ.
ಬೈಕಲ್ಲಿ ಸಹ ಸವಾರನಾಗಿ ಸಂಚರಿಸುತ್ತಿದ್ದ ಪೊಳಲಿ ಕೊಳತ್ತಮಜಲು ನಿವಾಸಿ ಮಹಮ್ಮದ್ ಶಾಫಿ (20)ಮೃತ ಪಟ್ಟ ಯುವಕ. ನಿನ್ನೆ ಮಧ್ಯಾಹ್ನ ಕುತ್ತಾರು ಆದಿ ಸ್ಥಳ ಕೊರಗಜ್ಜನ ಕಟ್ಟೆಯ ಬಳಿ ಕುತ್ತಾರಿನಿಂದ ಎಲಿಯಾರ್ ಪದವಿಗೆ ಮೂವರನ್ನು ಕುಳ್ಳಿರಿಸಿಕೊಂಡು ಧಾವಿಸುತ್ತಿದ್ದ ಬೈಕ್ ಸವಾರ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಖಾಸಗಿ 44 ರೂಟ್ ನಂಬರ್ ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಪರಿಣಾಮ ಬೈಕಲ್ಲಿದ್ದ ಮೂವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸಹಸವಾರ ಮಹಮ್ಮದ್ ಶಾಫಿ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸಹಸವಾರ ರಾಣಿಪುರ ನಿವಾಸಿ ಮಹಮ್ಮದ್ ಇಮ್ರಾನ್ (20) ಮತ್ತು ಬೈಕ್ ಚಾಲಕ ಕಲ್ಲಡ್ಕ ನಿವಾಸಿ ಮಹಮ್ಮದ್ ಮೌಷಿನ್ (23)ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಯುವಕನ ಸಹಿತ ಬೈಕಲ್ಲಿ ಸಂಚರಿಸುತ್ತಿದ್ದ ಮೂರು ಮಂದಿ ಯುವಕರು ಹೆಲ್ಮೆಟ್ ಧರಿಸಿರಲಿಲ್ಲವೆಂದು ತಿಳಿದು ಬಂದಿದೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A triple ride kills one in an accident after the bike got skid and rammed into the bus at Kuthar in Mangalore. The deceased has been identified as Shaffi. The other two are said to be out of danger
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm