ಬ್ರೇಕಿಂಗ್ ನ್ಯೂಸ್
09-04-21 08:26 pm Mangaluru correspondent ಕರಾವಳಿ
ಮಂಗಳೂರು, ಎ.9 : ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾಗಿದ್ದು ಆರೋಪಿಗೆ ಶಿಕ್ಷೆ ಘೋಷಣೆ ಮಾಡಲಾಗಿದೆ.
ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರು. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ
ಶಶಿಕುಮಾರ್ (29) ಶಿಕ್ಷೆಗೆ ಒಳಗಾದ ಅಪರಾಧಿ. ಮೂಡುಬಿದಿರೆಯಲ್ಲಿ ಫೈನಾನ್ಸ್ ಒಂದರಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ, ತನ್ನ ದೊಡ್ಡಮ್ಮನ ಮಗಳಾದ ಅಕ್ಕನ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕಳಾಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದಳು. ಆಕೆಯೊಂದಿಗೆ ಸಲುಗೆ ಬೆಳೆಸಿ, 2017ರ ನವೆಂಬರ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಆಬಳಿಕ ಹಲವು ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.
ಕೆಲವು ಸಮಯದ ಬಳಿಕ ಆಕೆಗೆ ವಿಪರೀತ ಸುಸ್ತು ಕಾಣಿಸಿಕೊಂಡಿದ್ದು, ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂದಿತ್ತ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು. ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018 ಜೂ.26ರಂದು ದೂರು ನೀಡಿದ್ದರು.
ಆರೋಪಿಯನ್ನು ಬಂಧಿಸಿ ಅಂದಿನ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಯುವತಿಯ ಮಗು ಹಾಗೂ ಶಶಿಕುಮಾರ್‌ನ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿದೆ. 13 ಮಂದಿ ಸಾಕ್ಷಿ ಹೇಳಿದ್ದರು. 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ನ್ಯಾಯಾಧೀಶರಾದ ಸಾವಿತ್ರಿ ವೆಂಕಟರಮಣ ಅವರು ವಾದ- ಪ್ರತಿವಾದ ಆಲಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ ೧ ಲಕ್ಷ ರು. ಸಂತ್ರಸ್ತೆಗೆ ನೀಡಬೇಕು. ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರು. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ. ಸರ್ಕಾರದ
ಪರವಾಗಿ ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ವಾದಿಸಿದ್ದರು.
Mangalore Girl raped in Moodbidri court sentences 10 years jail term to accused Shashikumar (29).
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm