ಬ್ರೇಕಿಂಗ್ ನ್ಯೂಸ್
11-04-21 09:15 pm Mangaluru correspondent ಕರಾವಳಿ
ಮಂಗಳೂರು, ಎ.11: ಕೊರೊನಾ ಕಾರಣದಿಂದಾಗಿ ಜನತೆ ಆತಂಕ ಪಡುತ್ತಿರುವ ಈ ಸಂದರ್ಭದಲ್ಲಿ ಮುಷ್ಕರ ಹೂಡಿ ಸಾರ್ವಜನಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ಒಳಪಡಿಸುವುದು ಸರಿಯಲ್ಲ. ಸರಕಾರದ ಮೇಲೆ ವಿಶ್ವಾಸವಿಟ್ಟು ಮುಂದಿನ ದಿನಗಳಲ್ಲಿ ನೌಕರರ ಸಮಸ್ಯೆ ಪರಿಹಾರವಾಗಲಿದೆ ಎಂಬ ಭರವಸೆಯೊಂದಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಐದನೇ ದಿನಕ್ಕೆ ಮುಂದುವರೆಯುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಹೊರಡುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ
ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಪ್ರತಿ ದಿವಸ ಸುಮಾರು 480 ವಾಹನಗಳು ಸಂಚರಿಸುತ್ತಿದ್ದು, ಪ್ರಸ್ತುತ ಮುಷ್ಕರದ ಅವಧಿಯಲ್ಲಿ ಎ. 10ರಂದು ಸುಮಾರು 140 ವಾಹನಗಳು ಬೆಂಗಳೂರು, ಮೈಸೂರು, ಧರ್ಮಸ್ಥಳ, ಹುಬ್ಬಳ್ಳಿ, ಕಾಸರಗೋಡು, ಹೈದ್ರಾಬಾದ್, ಮಧುರೈ, ಕೊಯಮತ್ತೂರು, ಮಂತ್ರಾಲಯ ಮುಂತಾದ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಿವೆ. ಅದೇ ರೀತಿ ಎ.11 ರಂದು ಸುಮಾರು 200 ವಾಹನಗಳಲ್ಲಿ ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳನ್ನು ಕಾರ್ಯಾಚರಿಸಲು ಅಗತ್ಯ ಯೋಜನೆಗಳನ್ನು ಮಾಡಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿಯೂ ಬಸ್ ಸಂಚಾರ ಹೆಚ್ಚುತ್ತಿದ್ದು ಎ. 10ರಂದು 47 ವಾಹನಗಳು ಮತ್ತು ಎ.11ರಂದು ಸುಮಾರು 75 ವಾಹನಗಳನ್ನು ಬೆಂಗಳೂರು, ಮೈಸೂರು, ಶಿವಮೊಗ್ಗ, ಪುತ್ತೂರು, ಮಡಿಕೇರಿ ಮುಂತಾದ ಮಾರ್ಗಗಳಲ್ಲಿ ಬಿಡಲಾಗುತ್ತಿದೆ.
ಈಗಾಗಲೇ ಕರ್ತವ್ಯಕ್ಕೆ ಹಾಜರಾದ ನೌಕರರೆಲ್ಲರಿಗೆ ಅಭಿನಂದನೆ ಸಲ್ಲಿಸಿ, ಇನ್ನುಳಿದ ನೌಕರರು ಕೂಡ ಕರ್ತವ್ಯಕ್ಕೆ ಹಾಜರಾಗಿ ಕೊರೋನಾ ಸಂಕಷ್ಟ ಕಾಲದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಸಚಿವ ಕೋಟ ಮನವಿ ಮಾಡಿದ್ದಾರೆ.
Mangalore Kota Srinivas poojary urge kSRTC staffs to come back to duty by leaving their strike as it's causing much problems to general public.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm