ಮಂಗಳೂರು ಕಮಿಷನರೇಟ್ ; 35 ಮಹಿಳಾ ಸಿಬಂದಿಗೆ ವರ್ಕ್ ಫ್ರಮ್ ಹೋಮ್ !

18-04-21 11:21 am       Mangaluru correspondent   ಕರಾವಳಿ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 35 ಮಂದಿ ಮಹಿಳಾ ಪೊಲೀಸರಿಗೆ  ಎ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಮಂಗಳೂರು, ಎ.18 : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 35 ಮಂದಿ ಮಹಿಳಾ ಪೊಲೀಸರಿಗೆ  ಎ.30ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಗರ್ಭಿಣಿಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಮಹಿಳಾ ಸಿಬ್ಬಂದಿ ಮನೆಯಲ್ಲಿಯೇ ಇದ್ದು ಕಂಪ್ಯೂಟರ್/ ಲ್ಯಾಪ್ ಟಾಪ್ ಗಳಲ್ಲಿ ಕಚೇರಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ. 

ಕಳೆದ ಬಾರಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 300ಕ್ಕೂ ಅಧಿಕ ಮಂದಿ ಕರ್ತವ್ಯ ನಿರತ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಕೊರೊನಾ ಎರಡನೇ ಅಲೆ ವ್ಯಾಪಿಸುತ್ತಿರುವಾಗಲೇ ಮಹಿಳಾ ಸಿಬಂದಿಗಳಿಗೆ ರಿಯಾಯಿತಿ ನೀಡಲಾಗಿದೆ.‌

ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು ಪ್ರತ್ಯೇಕ ಕಿಯೋಸ್ಕ್‌ ಆರಂಭಿಸಿದ್ದು ಸೂಕ್ತ ಎಚ್ಚರ ವಹಿಸಿದ ಬಳಿಕವೇ ದೂರು ಸ್ವೀಕರಿಸಲು ವ್ಯವಸ್ಥೆ ಮಾಡಲಾಗಿದೆ.

35 Women police staff have been ordered to work from home to prevent them from Coronavirus said Mangalore Police Commissioner Shashi Kumar.