ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೊರೊನಾ ಸೋಂಕು, ಆಸ್ಪತ್ರೆಗೆ ದಾಖಲು !

18-04-21 01:45 pm       Mangaluru correspondent   ಕರಾವಳಿ

ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಮಂಗಳೂರು, ಎ.18: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕೊರೊನಾ ಸೋಂಕಿಗೆ ಒಳಗಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕೇರಳ ಹಾಗೂ ರಾಜ್ಯ ಉಪ ಚುನಾವಣೆ ಹಿನ್ನಲೆಯಲ್ಲಿ ಸುತ್ತಾಟದಲ್ಲಿದ್ದ ಹರೀಶ್ ಕುಮಾರ್ ಅವರಿಗೆ ಏ.12ರಂದು ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನಲೆಯಲ್ಲಿ ಬೀದರ್‌ನಲ್ಲಿ ಕೊರೊನಾ ತಪಾಸಣೆ ನಡೆಸಿದ್ದರು. ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆ ಬಳಿಕ ದೇಹದಲ್ಲಿ ನಿಶ್ಶಕ್ತಿ ಕಂಡುಬಂದ ಹಿನ್ನಲೆಯಲ್ಲಿ ಏ.16ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮತ್ತೆ ಕೊರೊನಾ ತಪಾಸಣೆ ನಡೆಸಿದ್ದು, ಪಾಸಿಟಿವ್ ಬಂದಿದೆ. 

ದೇಹದಲ್ಲಿ ನಿಶ್ಶಕ್ತಿ ಹೊರತು ಕೊರೊನಾ ಸಂಬಂಧಿತ ಯಾವುದೇ ಲಕ್ಷಣಗಳು ಇಲ್ಲ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ. ಹರೀಶ್ ಕುಮಾರ್ ಮಾ. 21ರಿಂದ 27ರ ವರೆಗೆ ಕೇರಳದಲ್ಲಿ ಹಾಗೂ ಮಾ. 30ರಿಂದ ಏ.16ರ ವರೆಗೆ ಬೀದರ್ ಬಸವ ಕಲ್ಯಾಣದ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು.

Mangalore congress Legislator Harish Kumar has been tested covid positive for coronavirus. He has been admitted to the Hospital.