ಬಜಪೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಬೆಂಕಿ

19-04-21 11:08 am       Mangalore Correspondent   ಕರಾವಳಿ

ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 

ಮಂಗಳೂರು, ಎ.19; ನಗರ ಹೊರವಲಯದ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 

ಇಂದು ಬೆಳಗ್ಗೆ 9.15ರ ಸುಮಾರಿಗೆ ಘಟನೆ ನಡೆದಿದ್ದು, ಕಚೇರಿ ಒಳಗಿನ ಎಸಿ ಯಂತ್ರದಲ್ಲಿ ಸ್ಫೋಟ ಆಗಿರುವುದು ಘಟನೆಗೆ ಕಾರಣ ಎನ್ನಲಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ. ಕಚೇರಿ ಒಳಗಿಂದ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು.

Bajpe Fire breaks out at Bajpe Vyavsaya Cooperative Bank in Mangalore due to a short circuit.