ಬ್ರೇಕಿಂಗ್ ನ್ಯೂಸ್
21-04-21 11:28 am Udupi Correspondent ಕರಾವಳಿ
ಉಡುಪಿ, ಎ. 21 : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಪ್ರಕರಣದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸಲಿದೆ.
2021ರ ಮಾ.30ರಿಂದ ವಿಚಾರಣೆ ನಡೆದು ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದ್ದರೆ, ನಂತರ ಆರೋಪಿಗಳ ಪರ ವಕೀಲರು ಪ್ರತಿವಾದವನ್ನು ಮಂಡಿಸಿದ್ದರು.

ವಾದ ಆಲಿಸಿರುವ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ ಶೆಟ್ಟಿ ಹಾಜರಿದ್ದರು.
ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಬೆಳಕಿಗೆ ಬಂದಿತ್ತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್‌ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.
Udupi Bhaskar Shetty murder cases final verdict by the court to be held on May 29th by Udupi court.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm