ಬ್ರೇಕಿಂಗ್ ನ್ಯೂಸ್
22-04-21 03:36 pm Mangalore Correspondent ಕರಾವಳಿ
ಮಂಗಳೂರು, ಎ.22: ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಿದ ಹಿನ್ನೆಲೆಯಲ್ಲಿ ಮಂಗಳೂರು ಬಿಷಪ್ ತಮ್ಮ ವ್ಯಾಪ್ತಿಯ ಚರ್ಚ್ ಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನಾ ಪತ್ರ ಹೊರಡಿಸಿದ್ದಾರೆ. ಅಲ್ಲದೆ, ಮದುವೆ, ಅಂತ್ಯಕ್ರಿಯೆ ಹೊರತುಪಡಿಸಿ ಚರ್ಚ್ ಗಳಿಗೆ ಸಾರ್ವಜನಿಕರು ಬರದಂತೆ ಸೂಚನೆ ನೀಡಿದ್ದಾರೆ.
ನಮ್ಮ ಪ್ರಾರ್ಥನಾ ಕೇಂದ್ರ, ಚರ್ಚ್ ಗಳ ವ್ಯಾಪ್ತಿಯಲ್ಲೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಅದಕ್ಕಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಅನುಸರಿಸಲಾಗುವುದು. ಸ್ಥಳೀಯಾಡಳಿತದ ಅನುಮತಿಯೊಂದಿಗೆ ಚರ್ಚ್ ಒಳಗೆ ಮದುವೆ ಮತ್ತು ಅಂತ್ಯಕ್ರಿಯೆ ಪ್ರಕ್ರಿಯೆಗಳನ್ನು ನಡೆಸಲು ಮಾತ್ರ ಅವಕಾಶ ನೀಡಲಾಗಿದೆ.
ಮದುವೆ ಕಾರ್ಯಕ್ರಮಗಳಲ್ಲಿ ಅರ್ಚಕರು, ಫೋಟೋಗ್ರಾಫರ್ ಸೇರಿ 50 ಮಂದಿಗೆ ಮಾತ್ರ ಅವಕಾಶವಿದೆ. ಅಂತ್ಯಕ್ರಿಯೆಗಳಿಗೆ 20 ಜನರಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ಇರುತ್ತದೆ. ಮದುವೆ ಕಾರ್ಯಕ್ರಮಗಳಲ್ಲಿ ಆಯೋಜಕರೇ ಸ್ಥಳೀಯಾಡಳಿತಗಳಿಂದ ಪಾಸ್ ವ್ಯವಸ್ಥೆ ಮಾಡಿಸಿಕೊಂಡು ಬರಬೇಕು. ಪಾಲ್ಗೊಳ್ಳುವ ಮಂದಿ ಪಾಸ್ ಪಡೆದುಕೊಂಡು ಬರಬೇಕು.
ಮದುವೆಯಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ತಮ್ಮ ಐಡಿ ಕಾರ್ಡ್, ಇನ್ವಿಟೇಶನ್ ಕಾರ್ಡ್ ಮತ್ತು ಆಡಳಿತದಿಂದ ನೀಡಲಾಗುವ ಪಾಸ್ ಗಳನ್ನು ಹೊಂದಿರಬೇಕು. ಸ್ಥಳೀಯಾಡಳಿತದಿಂದ ನೀಡಿರುವ ಪಟ್ಟಿಯಲ್ಲಿ ಅವರ ಹೆಸರು ಇರಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರಕಾರದ ಜೊತೆ ಕೈಜೋಡಿಸಬೇಕು. ಕೋವಿಡ್ ಸೋಂಕನ್ನು ದೂರ ಮಾಡುವುದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು. ಪ್ರಾರ್ಥನಾ ಕೇಂದ್ರಗಳಿಂದ ದೂರವಿದ್ದು ಸಹಕರಿಸಬೇಕು ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನಾ ಮನವಿ ಮಾಡಿದ್ದಾರೆ.
Mangalore Bishop Peter Paul issues guidelines no church mass till May 4th only entry in catholic church for weddings and funerals during curfew.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm