ಬ್ರೇಕಿಂಗ್ ನ್ಯೂಸ್
26-04-21 05:56 pm Mangalore Correspondent ಕರಾವಳಿ
ಮಂಗಳೂರು, .26: ಜೈಲಿನಲ್ಲಿ ಕೈದಿಗಳ ನಡುವಿನ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಆರೋಪಿ ಕೈದಿಯ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಿಗೆ ಹಲ್ಲೆ, ಜೈಲು ಸಿಬಂದಿಗೆ ಹಲ್ಲೆ ನಡೆಸಿದ್ದು ಮತ್ತು ವಿಚಾರಣೆಗೆ ಬಂದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಆರೋಪಿ ಸಮೀರ್ ಎನ್ನುವ ಕೈದಿ ಕ್ಯಾರಂ ಬೋರ್ಡ್ ಫ್ರೇಮ್, ಟ್ಯೂಬ್ ಲೈಟ್, ಚಮಚ ಮತ್ತಿತರ ಸಾಮಗ್ರಿಗಳನ್ನು ಉಪಯೋಗಿಸಿ ಹಲ್ಲೆ ಕೃತ್ಯ ನಡೆಸಿದ್ದಾನೆ ಎನ್ನಲಾಗುತ್ತಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ, ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ಕೈದಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
ಇದಲ್ಲದೆ, ಮಂಗಳೂರಿನ ಜೈಲಿನಿಂದ 20 ಮಂದಿ ಕೈದಿಗಳನ್ನು ಬೆಳಗಾವಿ, ಶಿವಮೊಗ್ಗ ಮತ್ತು ಧಾರವಾಡ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಮಧ್ಯದಲ್ಲೇ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಮೀರ್, ಮೂಲ್ಕಿ ಮತ್ತು ಮೂಡುಬಿದ್ರೆಯ ಅನ್ಸಾರ್ ಹಾಗೂ ಜೈನುದ್ದೀನ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಕೈದಿಗಳ ರಕ್ಷಣೆಗೆ ಮುಂದಾಗಿದ್ದ ಜೈಲು ಸಿಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಭಾನುವಾರ ಬೆಳಗ್ಗೆ ಕೊಡಿಯಾಲಬೈಲಿನ ಜೈಲಿನಲ್ಲಿ ಘಟನೆ ನಡೆದಿತ್ತು.
Read: ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ
Four cases have been filed against Sammer for attacking inmates in Mangalore Jail and also attack police personnel said Police Commissioner Shashi Kumar.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm