ಮುಂದಿನ 3 ದಿನ ದಕ್ಷಿಣ ಕನ್ನಡ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆ

27-04-21 10:45 am       Mangalore Correspondent   ಕರಾವಳಿ

ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

 ಬೆಂಗಳೂರು, ಏ.27: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನ ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್. ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆ ಬೀಳಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

The next three days hevay rains expected in Dakshina Kannada and many districts of Karnataka official statement by weather forecast