ದ.ಕ. ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ; ಒಂದೇ ದಿನ ಸಾವಿರ ಗಡಿದಾಟಿದ ಸೋಂಕಿತರು !

29-04-21 08:42 pm       Mangaluru correspondent   ಕರಾವಳಿ

ಕರಾವಳಿಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಸೋಂಕಿತರ ಸಂಖ್ಯೆ ದಾಖಲೆ ಎನ್ನುವಂತೆ ಸಾವಿರದ ಗಡಿ ದಾಟಿದೆ. 

ಮಂಗಳೂರು, ಎ.29: ಕರಾವಳಿಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಸೋಂಕಿತರ ಸಂಖ್ಯೆ ದಾಖಲೆ ಎನ್ನುವಂತೆ ಸಾವಿರದ ಗಡಿ ದಾಟಿದೆ. 

ದ.ಕ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 1,175 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.‌ 

ಇಂದು ಕೊರೋನಾಗೆ ಓರ್ವರು ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 756 ಕ್ಕೆ ಏರಿಕೆಯಾಗಿದೆ.‌

ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 43,904 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 5,662 ಸಕ್ರಿಯ ಪ್ರಕರಣಗಳಿವೆ. 

ಲಾಕ್ಡೌನ್ ಇದ್ದರೂ, ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.

The Covid-19 situation appears to have reached an alarming stage in Dakshina Kannada, which on Thursday reported the highest-ever single-day spike of 1,175 positive cases, leaving the people of the district concerned over the grim situation.