ಬ್ರೇಕಿಂಗ್ ನ್ಯೂಸ್
03-05-21 09:30 pm Mangaluru Correspondent ಕರಾವಳಿ
ಮಂಗಳೂರು, ಮೇ 3: ಕೋವಿಡ್ 19 ನಿಯಂತ್ರಿಸುವಲ್ಲಿ ರಾಜ್ಯ ಸಕಾರ ಸಂಪೂರ್ಣ ವಿಫಲ್ಯವಾಗಿರುವುದಕ್ಕೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಮಂದಿ ರೋಗಿಗಳು ಸಾವನ್ನಪ್ಪಿರುವುದು ಸಾಕ್ಷಿಯಾಗಿದೆ. ನಿಜಕ್ಕೂ ಇದೊಂದು ದುರಂತ ಹಾಗೂ ಸರಕಾರದ ಪಾಲಿಗೆ ನಾಚಿಕೆಗೇಡಿನ ಸಂಗತಿ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಬಗ್ಗೆ ಡಿಸೆಂಬರ್‌ನಲ್ಲೇ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಬೇಕಾದ ಮೂಲಸೌಕರ್ಯ ಮಾಡಬೇಕಿತ್ತು. ಆದರೆ ಆಡಳಿತದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿನ ಕೋವಿಡ್ ಗಣನೀಯವಾಗಿ ಏರಿಕೆಯಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಕಾಡುತ್ತಿದೆ. ಚಾಮರಾಜನಗರದಲ್ಲಿ ಒಂದೇ ದಿನದಲ್ಲಿ 24 ಮಂದಿ ಆಕ್ಸಿಜನ್ ಸಿಗದೆ ಮೃತಪಟ್ಟಿರುವುದು ಬೇಸರದ ಸಂಗತಿ. ಕೂಡಲೇ ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಇನ್ನು ಮುಂದೆ ಈ ರೀತಿಯ ಘಟನೆ ನಡೆಯದಂತೆ ಎಚ್ಚರ ವಹಿಸಬೇಕಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಮಸ್ಯೆ ಎದುರಾಗಿದೆ. ಇದೇ ರೀತಿ ಮುಂದುವರಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಂಗಳೂರು, ಚಾಮರಾಜನಗರ ಪರಿಸ್ಥಿತಿ ಬರಬಹುದು. ಜಿಲ್ಲಾಡಳಿತ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಜನರ ಸಂಕಷ್ಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನು ಆಡಳಿತ ಮಾಡಲಿ ಎಂದರು.
ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಜಿಲ್ಲೆಯ ಜನರು ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಜಾಗೃತಿ ವಹಿಸಬೇಕಾಗಿದೆ. ಪ್ರತಿಯೊಬ್ಬರೂ ಸರಕಾರ, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿಕೊಂಡು ಸಹಕಾರ ನೀಡಿದಾಗ ಮಾತ್ರ ಕೋವಿಡ್ ಮಾಹಾಮಾರಿಯನ್ನು ನಿಗ್ರಹಿಸಲು ಸಾಧ್ಯ ಎಂದು ಹರೀಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
BJP government is sole responsible for the death of 24 Covid-19 patients died in the last 24 hours after a government hospital in Karnataka’s Chamarajanagar allegedly ran out of medical oxygen stated Congress MLC Harish Kumar in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm