ದ.ಕ. ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ; 24 ಗಂಟೆಗೆ ತೊಂದರೆ ಇಲ್ಲ ಎಂದ ಜಿಲ್ಲಾಧಿಕಾರಿ !!

03-05-21 09:47 pm       Mangaluru Correspondent   ಕರಾವಳಿ

ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.

ಮಂಗಳೂರು, ಮೇ 3: ಬೆಂಗಳೂರಿನಲ್ಲಿ ಕೊರೊನಾ ಪರಿಸ್ಥಿತಿ ಸಂಕಷ್ಟ ತಂದಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯ ಆಗಿದ್ಯಾ ಎನ್ನುವ ಅನುಮಾನ ಉಂಟಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲೆಯಲ್ಲಿ 66 ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರಿಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯಿಂದ ಆಕ್ಸಿಜನ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ. ಆದರೆ, ಅದರಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಕೋವಿಡ್ ನೋಡಲ್ ಅಧಿಕಾರಿಯ ಗಮನಕ್ಕೆ ತರಲಾಗಿದೆ.

ಬಳ್ಳಾರಿಯಿಂದ ಆಕ್ಸಿಜನ್ ಪೂರೈಸಲು ವ್ಯವಸ್ಥೆ ಮಾಡುವ ಬಗ್ಗೆ ನೋಡಲ್ ಅಧಿಕಾರಿ ಬಳಿ ಕೇಳಿಕೊಳ್ಳಲಾಗಿದೆ. ಸದ್ಯಕ್ಕೆ ಸರಕಾರಿ ವ್ಯವಸ್ಥೆಯಲ್ಲಿ ಜಂಬೋ ಸಿಲಿಂಡರ್ ವ್ಯವಸ್ಥೆ ಇದೆ‌ ಆದರೆ, ಹೊರ ಜಿಲ್ಲೆಯಿಂದ ಕೋವಿಡ್ ಚಿಕಿತ್ಸೆಗೆ ಬಂದರೆ, ಸಮಸ್ಯೆ ಆಗುವ ಸಾಧ್ಯತೆ ಇರುತ್ತದೆ. ಆದರೂ 24 ಗಂಟೆಗೆ ಬೇಕಾಗುವಷ್ಟು ಆಕ್ಸಿಜನ್ ಸಂಗ್ರಹ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಸ್ಪಷ್ಟನೆ:

ಜಿಲ್ಲಾಧಿಕಾರಿ ಈ ಬಗ್ಗೆ ನೀಡಿರುವ ಒಂದೂವರೆ ನಿಮಿಷದ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ರಾಜೇಂದ್ರ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ. ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ ಆಸ್ಪತ್ರೆಗಳಿಗೆ 24 ಗಂಟೆಯೂ ಆಕ್ಸಿಜನ್ ಪೂರೈಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ.

Mangalore Deputy Commissioner Dr Rajendra Kumar has said the district administration had sufficient supply of medical oxygen and Remdesivir vials necessary for the treatment of COVID-19 patients.