ಬ್ರೇಕಿಂಗ್ ನ್ಯೂಸ್
07-05-21 01:04 pm Mangalore Correspondent ಕರಾವಳಿ
ಮಂಗಳೂರು, ಮೇ 7: ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಸವಾರ ಪ್ರಶಾಂತ್ ಎಂಬ ಯುವಕ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಎರಡು ಪಲ್ಟಿ ಹೊಡೆದಿದ್ದಾನೆ. ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಮತ್ತೊಂದು ಬೈಕಿನ ನಡುವೆ ನುಗ್ಗಿ ಬಂದ ಕೆಟಿಎಂ ಬೈಕ್ ಅಂಗಡಿಯೊಂದರ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಬೈಕ್ ಪಲ್ಟಿಯಾಗಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ನೇರವಾಗಿ ಗಾಳಿಯಲ್ಲಿ ಮೇಲ್ಮುಖವಾಗಿ ಉಲ್ಟಾ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾನೆ. ಬೈಕ್ ರಸ್ತೆಗೆ ಅಡ್ಡ ಬಿದ್ದ ಪರಿಣಾಮ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕಿನ ಮೇಲೆ ತಾಗಿ ಅದು ಕೂಡ ಉರುಳಿ ಬಿದ್ದಿದೆ. ಅದರಲ್ಲಿದ್ದ ಸವಾರ ಸ್ವಲ್ಪ ಗಾಯಗೊಂಡು ಅಲ್ಲಿಂದ ಎದ್ದು ಹೋಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಆತನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Read: ಬೈಕ್ ಪಲ್ಟಿ ; ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
Video:
Horrific accident at Padavinangady youth thrown in the air after a bike accident in Mangalore. The KTM bike rider met with an accident after he went to save the Active rider who stood at the middle of the road.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm