ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm