ಬ್ರೇಕಿಂಗ್ ನ್ಯೂಸ್
09-05-21 03:57 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಮೃತಪಟ್ಟ ಹಿಂದು ಧರ್ಮೀಯರ ಶವಗಳನ್ನು ಅಂತ್ಯ ಸಂಸ್ಕಾರ ಮಾಡಲು ಬಜರಂಗದಳದ ಸ್ವಯಂಸೇವಕರು ಇದ್ದಾರೆ. ಮುಸ್ಲಿಂ ಸಂಘಟನೆಗಳು ಈ ಕೆಲಸ ಮಾಡಿ ಪ್ರಚಾರ ಪಡೆಯುವ ಅಗತ್ಯವಿಲ್ಲ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಂಚಾಲಕ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಇತ್ತೀಚೆಗೆ ಹಿಂದೂಗಳ ಮೃತದೇಹವನ್ನು ಮುಸಲ್ಮಾನರು ಅಂತ್ಯಸಂಸ್ಕಾರ ಮಾಡಿದರು ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆಯುತ್ತಿದೆ. ಇದನ್ನು ತಪ್ಪಿಸಲು ಮಂಗಳೂರಿನ ವಿಶ್ವ ಹಿಂದು ಪರಿಷತ್ ವತಿಯಿಂದ ಕರಾವಳಿಯ ಎಲ್ಲ ಆಸ್ಪತ್ರೆಗಳಿಗೆ ಹಿಂದುಗಳ ಶವವನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕೆಂದು ಒತ್ತಾಯ ಮಾಡಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ವಿಶ್ವ ಹಿಂದು ಪರಿಷದ್ ಮುಖಂಡ ಶರಣ್ ಪಂಪ್ವೆಲ್, ಉಡುಪಿ ಮತ್ತು ಮಂಗಳೂರಿನ ಆಸ್ಪತ್ರೆಗಳ ಆಡಳಿತ ಮಂಡಳಿಯವರು ಕೋವಿಡ್‌ನಿಂದ ಹಿಂದುಗಳು ಮೃತರಾದರೆ ಅವರ ಶವಗಳನ್ನು ಹಿಂದೂಗಳಿಗೆ ಮಾತ್ರ ಬಿಟ್ಟು ಕೊಡಬೇಕು. ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಮಾಡಲು ಹಿಂದೂ ಕಾರ್ಯಕರ್ತರ ಪಡೆ ಸಿದ್ಧವಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಕೆಲ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶವ ಸಂಸ್ಕಾರ ಮಾಡಿ ಪ್ರಚಾರ ಪಡೆಯುವ ಉದ್ದೇಶದಿಂದ ತಮ್ಮ ಸೇವೆಯನ್ನು ಮಾರಾಟ ಮಾಡುತ್ತಿದ್ದಾರೆ. ಇದರ ಅವಶ್ಯಕತೆ ಹಿಂದುಗಳಿಗಿಲ್ಲ. ಹಿಂದುಗಳ ಶವ ಅನಾಥವಾಗಲು ಯಾವತ್ತೂ ಸಾಧ್ಯವಿಲ್ಲ. ಈಗಾಗಲೇ ಬಜರಂಗದಳದ ಸ್ವಯಂಸೇವಕರ ತಂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ಕಾರ್ಯ ನಡೆಸುತ್ತಿದ್ದು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಮಾಡುತ್ತಿದೆ ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
Let Muslims not cremate the dead bodies of Hindus who have died of Covid-19 in Mangalore and then post it on their Facebook for publicity said VHP Leader Sharan Pumpwell striking controversy by posting a post on his Facebook wall. He also added we have enough Hindu members to cremate the dead bodies of our Hindus brothers and sisters.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 12:26 pm
Mangalore Correspondent
Thokottu, Mangalore: ತೊಕ್ಕೊಟ್ಟು ನಾಗರಿಕರ ಎಪ್ಪತ...
18-07-25 10:11 pm
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm