ಬ್ರೇಕಿಂಗ್ ನ್ಯೂಸ್
09-05-21 09:37 pm Mangaluru Correspondent ಕರಾವಳಿ
ಮಂಗಳೂರು, ಮೇ 9: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಕುಟುಂಬಸ್ಥರು ಅಲ್ಲಿನ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಟ್ಲ ಸಮೀಪದ ಸಾಲೆತ್ತೂರು ನಿವಾಸಿ ಭಾರತಿ ರೈ(52) ಮೃತ ಮಹಿಳೆ. ಮೇ 5ರಂದು ಅವರನ್ನು ಪುತ್ತೂರಿನಲ್ಲಿ ತಪಾಸಣೆಗೆ ಒಳಪಡಿಸಿದ್ದು, ಕೊರೊನಾ ಪಾಸಿಟಿವ್ ಆಗಿದ್ದರು. ಪಲ್ಸ್ ರೇಟ್ ಕಡಿಮೆ ಇದ್ದುದರಿಂದ ಮಂಗಳೂರಿಗೆ ಕರೆತಂದು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.



ಮಹಿಳೆಗೆ ಆಕ್ಸಿಜನ್ ಕೊಟ್ಟಿದ್ದರಿಂದ ಸ್ವಲ್ಪ ಗುಣಮುಖರಾಗಿದ್ದರು. ಊಟ, ತಿಂಡಿಯನ್ನೂ ಮಾಡುತ್ತಿದ್ದರು. ವೆನ್ಲಾಕ್ ಆಸ್ಪತ್ರೆಗೆ ದಾಖಲಾದ ಬಳಿಕವೂ ಫೋನಲ್ಲಿ ಮಾತನಾಡುತ್ತಿದ್ದರು. ಇಂದು ಮಧ್ಯಾಹ್ನವೂ ಫೋನಲ್ಲಿ ಮಾತನಾಡಿದ್ದಾರೆ. ಆದರೆ, ಇಂದು ವೆಂಟಿಲೇಟರ್ ಗೆ ಹಾಕಿದ್ದರಂತೆ. ಸಂಜೆ ವೇಳೆಗೆ ಮೃತಪಟ್ಟಿರುವ ಬಗ್ಗೆ ವೈದ್ಯರು ಹೇಳುತ್ತಿದ್ದಾರೆ. ಕೇಳಿದ್ದಕ್ಕೆ ವೆಂಟಿಲೇಟರ್ ಸರಿಯಿಲ್ಲ ಎನ್ನುತ್ತಿದ್ದಾರೆ. ನಾವು ಡ್ಯೂಟಿ ಡಾಕ್ಟರ್ ಇಬ್ಬರೇ ಇರುವುದು. ಎಲ್ಲವನ್ನೂ ಸಂಭಾಳಿಸಬೇಕು ಎನ್ನುತ್ತಿದ್ದಾರೆ ಎಂಬುದಾಗಿ ಮೃತರ ಸಂಬಂಧಿಕರು ದೂರಿದ್ದಾರೆ.
ಸಂಬಂಧಿಕರು ಅಲ್ಲಿನ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ತರಾಟೆಗೆತ್ತಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಅಲ್ಲದೆ, ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಕೂಡ ಆಸ್ಪತ್ರೆಗೆ ಬಂದಿದ್ದು, ವೈದ್ಯರ ಜೊತೆ ಮಾತುಕತೆ ನಡೆಸಿದ್ದಾರೆ. ವೆಂಟಿಲೇಟರ್ ಸಮಸ್ಯೆಯಿಂದಾಗಿ ಮಹಿಳೆಯ ಸಾವು ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ಮತ್ತು ಜಿಲ್ಲಾಡಳಿತ ತನಿಖೆ ನಡೆಸಬೇಕಿದೆ.
A fight erupted at the Wenlock government hospital after a Women died of covid 19 at the hospital. The family and relatives of the deceased have alleged that the negligence of the doctors is the reason for her death. The deceased has been identified as Bharathi Rai (52).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm