ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm