ಚಂಡಮಾರುತ ; ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ !

14-05-21 11:09 am       Mangalore Correspondent   ಕರಾವಳಿ

ರಾಜ್ಯದ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.‌

Photo credits : Representative Image

ಉಡುಪಿ, ಮೇ 13 : ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ರಾಜ್ಯದ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.‌

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೇ 14ರಂದು ಆರೆಂಜ್ ಅಲರ್ಟ್ ಹಾಗೂ ಮೇ 15 ಮತ್ತು 16ರಂದು ರೆಡ್ ಅಲರ್ಟ್‌ ಘೋಷಿಸಲಾಗಿದೆ. ಬಳಿಕ 17 ಮತ್ತು 18ರಂದು ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಈ ಸಂದರ್ಭದಲ್ಲಿ ಗುಡುಗು-ಸಿಡಿಲು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರಿಗೆ ಹಲವು ಸೂಚನೆಗಳನ್ನು ನೀಡಿದೆ.  ಜಿಲ್ಲೆ / ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಮೀನುಗಾರರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ/ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳನ್ನು ತಲುಪಬೇಕು.

ತುರ್ತು ಸೇವೆಗಾಗಿ ಟೋಲ್‌ಫ್ರಿ ನಂ.1077 ಅಥವಾ ದೂರವಾಣಿ ಸಂಖ್ಯೆ: 0820- 2574802ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

The meteorological department said that due to the effect of cyclone Tauktae, a red alert has been issued from May 14 to 16 and an orange alert till the morning of May 18 thereafter. During the red alert, the coast is likely to receive heavy rain coupled with thunder, lightning, and strong wind which may exceed 204.5 mm.