ಬ್ರೇಕಿಂಗ್ ನ್ಯೂಸ್
14-05-21 04:46 pm Mangalore Correspondent ಕರಾವಳಿ
ಮಂಗಳೂರು, ಮೇ 14: ಲಾಕ್ಡೌನ್ ವೇಳೆ ಸದಾ ಬೀದಿ ಸುತ್ತುವ ಪೊಲೀಸರಿಗೆ ಕೊರೊನಾ ಸೋಂಕು ಹರಡುತ್ತಿದ್ದು, ಇದನ್ನು ಮನಗಂಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.
ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.



ಈ ವೇಳೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಈಗಾಗ್ಲೇ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ. ಆದರೆ, ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.
ಅಲ್ಲದೆ, ಊಟ, ತಿಂಡಿ, ಚಹಾವನ್ನು ಕಾಲ ಕಾಲಕ್ಕೆ ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ರೆಡಿ ಮಾಡಿ ಕೊಡುತ್ತಿದ್ದಾರೆ. ಟಿವಿ, ನೀರು, ಬೆಡ್ ವ್ಯವಸ್ಥೆ ಎಲ್ಲ ಇರುವುದರಿಂದ ತೊಂದರೆ ಇಲ್ಲ. ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.



ಭವಿಷ್ಯದಲ್ಲಿ ಇಲ್ಲಿನ ಬೆಡ್ ವ್ಯವಸ್ಥೆ ಸಾಕಾಗದಿದ್ದಲ್ಲಿ ಸುರತ್ಕಲ್ ಎನ್ಐಟಿಕೆಯಲ್ಲಿ ಕಳೆದ ಬಾರಿ ರೆಡಿ ಮಾಡಿದ್ದ ಕೋವಿಡ್ ಕೇರ್ ಸೆಂಟರ್ ಇದೆ. ಫ್ರಂಟ್ ಲೈನ್ ವಾರಿಯರ್ಸ್ ಗಾಗಿಯೇ ಅಲ್ಲಿ 300 ಬೆಡ್ ಗಳ ಸೆಂಟರ್ ಇದೆ. ಅದನ್ನೂ ಅಗತ್ಯ ಬಿದ್ದರೆ ಬಳಸಿಕೊಳ್ಳಲಾಗುವುದು ಎಂದು ಕಮಿಷನರ್ ಹೇಳಿದರು.
Deputy Commissioner (DC) Dr. Rajendra KV inaugurated an 18-bed Covid care center, exclusively for police personnel and for their family members in the now vacant student ladies hostel near St Aloysius Gonzaga School, here on Friday, May 14.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm