ಬ್ರೇಕಿಂಗ್ ನ್ಯೂಸ್
16-05-21 05:41 pm Udupi Correspondent ಕರಾವಳಿ
ಉಡುಪಿ, ಮೇ 16: ಕರಾವಳಿಗೆ ಅಪ್ಪಳಿಸಿರುವ ತೌಕ್ತೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಿ, ಚಂಡಮಾರುತದಿಂದ ಯಾವುದೇ ಅಪಾಯ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಜತೆ ನಡೆಸಿದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಇದೇ ವೇಳೆ, ಎಸ್‌ಡಿಆರ್‌ಎಫ್ ನಿಧಿಯಿಂದ ನೀಡಲಾಗಿರುವ 60 ಕೋಟಿ ಹಣವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ತೌಕ್ತೆ ಚಂಡಮಾರುತದ ಪ್ರಭಾವ ನಾಲ್ಕು ದಿನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಬೇಕು. ತಗ್ಗು ಪ್ರದೇಶದಿಂದ ಸಾರ್ವಜನಿಕರನ್ನು ಸ್ಥಳಾಂತರಗೊಳಿಸಿ. ಸ್ಥಳಾಂತರಗೊಂಡ ಜನರಿಗೆ ಆಹಾರ ಮತ್ತು ಇತರೆ ವಸ್ತುಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವ ಉಂಟಾಗುವ ಸಾಧ್ಯತೆ ಇದೆ. ಯಾವುದೇ ರೀತಿಯ ಅನಾಹುತ, ಆಪತ್ತು ಎದುರಾದರೂ ಅದನ್ನು ನಿವಾರಿಸಲು ಸಿದ್ಧತೆ ಮಾಡಿಕೊಳ್ಳಿ. ತೌಕ್ತೆ ಚಂಡಮಾರುತದ ಬಗ್ಗೆ ಎಚ್ಚರ ಇರಲಿ ಎಂದರು.
ಇದಲ್ಲದೆ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಆದ್ಯತೆ ನೀಡಿ. ಖಾಸಗಿ ಆಸ್ಪತ್ರೆಗಳಿಂದ ಸರಕಾರಕ್ಕೆ ಬರಬೇಕಾದ ಬೆಡ್‌ಗಳನ್ನು ಪಡೆಯಿರಿ. ಆಕ್ಸಿಜನ್ ಪೂರೈಕೆಯನ್ನು ಸಮರ್ಪಕವಾಗಿ ಕೈಗೊಳ್ಳಿ. ಆಮ್ಲಜನಕವನ್ನು ಅಗತ್ಯಕ್ಕೆ ಅನುಗುಣವಾಗಿ ಬಳಕೆ ಮಾಡಿ. ಚಿಕಿತ್ಸೆ ಪಡೆದು ಗುಣಮುಖರಾಗಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ. ತೆರವಾದ ಐಸಿಯು ಮತ್ತು ಎಚ್ಡಿಯು ಬೆಡ್ ಗಳನ್ನು ಗಂಭೀರವಾಗಿ ಸೋಂಕಿತಗೊಂಡ ವ್ಯಕ್ತಿಗಳಿಗೆ ಬಳಸಿಕೊಳ್ಳಿ ಎಂದವರು ಸೂಚಿಸಿದರು.
ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಸುನಿಲ್‌ಕುಮರ್, ಲಾಲಾಜಿ ಆರ್ ಮೆಂಡನ್, ಜಿಲ್ಲಾದಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.
Karnatakas Home Minister Basavaraj Bommai holds review meeting online over Cyclone Tauktae in Udupi. Home Minister a meeting with administrator of Udupi to check preparedness ahead of the cyclone.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm