ಬ್ರೇಕಿಂಗ್ ನ್ಯೂಸ್
18-05-21 12:04 pm Mangalore Correspondent ಕರಾವಳಿ
ಮಂಗಳೂರು, ಮೇ 18: ನಗರದ ಮಂಗಳಾದೇವಿ ದೇವಸ್ಥಾನದ ಬಳಿಯ ಪೆಟ್ರೋಲ್ ಪಂಪ್ ಎದುರುಗಡೆ ನಿಲ್ಲಿಸಿದ್ದ ಖಾಸಗಿ ಬಸ್ ನಿನ್ನೆ ತಡರಾತ್ರಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
ರೂಟ್ ನಂಬ್ರ 15ರ ಮಂಗಳೂರು- ಸುರತ್ಕಲ್ ಸಂಚಾರ ನಡೆಸುತ್ತಿದ್ದ ರಾಜಲಕ್ಷ್ಮಿ ಹೆಸರಿನ ಖಾಸಗಿ ಬಸ್ಸನ್ನು ಇತ್ತೀಚೆಗೆ ಲಾಕ್ಡೌನ್ ಘೋಷಣೆಯಾದ ಬಳಿಕ ಅದೇ ಜಾಗದಲ್ಲಿ ನಿಲ್ಲಿಸಲಾಗಿತ್ತು. ಅಲ್ಲಿ ರಾಜಲಕ್ಷ್ಮಿ ಕಂಪನಿಗೆ ಸೇರಿದ ಇತರ ಮೂರ್ನಾಲ್ಕು ಬಸ್ ಗಳು ಕೂಡ ನಿಂತಿದ್ದವು. ಆದರೆ, ಒಂದು ಬಸ್ ಮಾತ್ರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.





ಘಟನೆ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಯಾರೋ ಕಿಡಿಗೇಡಿಗಳ ಕೃತ್ಯ ಆಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಈ ಬಗ್ಗೆ ಖಾಸಗಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ಬಳಿ ಕೇಳಿದಾಗ, ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಇಲ್ಲ. 15-20 ದಿನಗಳಿಂದ ಒಂದೇ ಕಡೆ ನಿಂತಿದ್ದರೆ ಬಸ್ಸಿನ ಬ್ಯಾಟರಿ ವೀಕ್ ಆಗಿರತ್ತೆ. ಪವರ್ ಇಲ್ಲದೆ ಶಾರ್ಟ್ ಸರ್ಕಿಟ್ ಆಗಲಿಕ್ಕಿಲ್ಲ. ಇದು ಯಾರೋ ರಾತ್ರಿ ಬಸ್ಸಿನಲ್ಲಿ ಒಳಗೆ ಬಂದು ಕುಳಿತವರ ಕೃತ್ಯ ಆಗಿರುವ ಸಾಧ್ಯತೆಯಿದೆ. ಇಲ್ಲದಿದ್ದರೆ ಉದ್ದೇಶಪೂರ್ವಕ ಯಾರೋ ಕೃತ್ಯ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
Video:
Miscreants set Route No 15 Bus Rajalakshmi which was parked since lockdown on Fire at Mangaladevi in Mangalore. The bus is completely gutted by fire.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm