ಬ್ರೇಕಿಂಗ್ ನ್ಯೂಸ್
19-05-21 03:57 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಕೊರೊನಾ ಲಾಕ್ಡೌನ್ ಮಧ್ಯೆ ರಾಜ್ಯದ ಪಡಿತರ ವ್ಯವಸ್ಥೆಯಲ್ಲಿಯೂ ಸಮಸ್ಯೆ ಉಂಟಾಗಿದ್ದು ಜನರಿಗೆ ಪಡಿತರ ಸಾಮಗ್ರಿಗಳನ್ನು ನೀಡುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನತೆಗೆ ಪಡಿತರ ವ್ಯವಸ್ಥೆಯ ಮೂಲಕ ನೆರವಾಗಬೇಕಿದ್ದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅಸಮರ್ಪಕ ಕಾರಣಕ್ಕಾಗಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಲಭಿಸುತ್ತಿಲ್ಲ. ಒಂದು ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ಮೂಲೆಯಲ್ಲಿ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಗ್ರಿ ಪಡೆಯುವಂತೆ ಮಾಡಿದ್ದ ವ್ಯವಸ್ಥೆ ಸ್ಥಗಿತಗೊಂಡು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಈ ಸಮಸ್ಯೆ ಇರಲಿಲ್ಲ. ಈಗ ಏಕೆ ಉದ್ಭವವಾಗಿದೆ ಎಂದು ಪ್ರಶ್ನಿಸಿದರು.
ಕೋವಿಡ್ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸರಕಾರ ಗಮನಹರಿಸಬೇಕಾಗಿತ್ತು. ಈಗ ಒಂದೊಂದು ಆಸ್ಪತ್ರೆಯಲ್ಲಿ ಒಂದೊಂದು ರೀತಿಯ ದರ ವಿಧಿಸಲಾಗುತ್ತಿದೆ. ನಾನು ಅಪಘಾತಕ್ಕೆ ಒಳಗಾಗಿ ಮನೆಯಲ್ಲಿ ಇದ್ದ ಕಾರಣ ಮನೆಯಲ್ಲಿ ಲಸಿಕೆ ಪಡೆಯಬೇಕಾಯಿತು. ಈ ಬಗ್ಗೆ ವಿವಾದ ಮಾಡಬೇಕಾಗಿಲ್ಲ ಎಂದರು.
ಕೋವಿಡ್ ಲಸಿಕೆ ನೀಡುವುದನ್ನು ಹಿಂದೆಯೂ ವಿರೋಧಿಸಿಲ್ಲ. ಆದರೆ ಬಿಜೆಪಿ ಜನಪ್ರತಿನಿಧಿಗಳು ಆರಂಭದಲ್ಲಿ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಅದನ್ನು ಮಾಡದೆ ಈಗ ಇತರರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲ ಜನರಿಗೆ ಲಸಿಕೆ ನೀಡಲು ಯಾವುದೇ ಪೂರ್ವ ತಯಾರಿ ಮಾಡದೆ ಇದ್ದ ಕಾರಣ ಲಸಿಕೆಗಾಗಿ ಜನ ಪರದಾಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಫಾರೂಕ್, ರಫೀಕ್, ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.
Ration card holders face huge trouble amid lockdown and therefore Government should concentrate on those issues says UT Khader in Mangalore.
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm