ಮಣಿಪಾಲದಲ್ಲಿ ಏಳು ಮಂದಿಗೆ ಬ್ಲಾಕ್ ಫಂಗಸ್ ಪತ್ತೆ ; ಹೊರ ಜಿಲ್ಲೆಯಿಂದ ಬಂದವರಿಗೆ ಸೋಂಕು

19-05-21 10:58 pm       Udupi Correspondent   ಕರಾವಳಿ

ಕೊರೊನಾ ಸೋಂಕಿನ ಜೊತೆಗೆ ರಾಜ್ಯದಲ್ಲಿ ಬ್ಲಾಕ್ ಫಂಗಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ.

ಉಡುಪಿ, ಮೇ 19: ಕೊರೊನಾ ಸೋಂಕಿನ ಜೊತೆಗೆ ರಾಜ್ಯದಲ್ಲಿ ಬ್ಲಾಕ್ ಫಂಗಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಸೋಂಕಿತರು ಪತ್ತೆಯಾಗಿದ್ದಾರೆ.

ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಹೊರ ಜಿಲ್ಲೆಗಳಿಂದ ಚಿಕಿತ್ಸೆ ಪಡೆಯಲು ಕೆಎಂಸಿಗೆ ದಾಖಲಾಗಿದ್ದ ರೋಗಿಗಳಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ. ಧಾರವಾಡ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಹರಿಹರ ಮೂಲದ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಇರುವುದು ಪತ್ತೆಯಾಗಿದೆ.

ಈಗಾಗಲೇ ಈ ಆರು ಮಂದಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದ್ದು, ಅನ್ಯ ಚಿಕಿತ್ಸೆಗೆ ದಾಖಲಾದವರಲ್ಲಿ ಸೋಂಕು ಕಂಡುಬಂದಿದೆ. ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಕೊರೋನಾ ರೋಗಿಗಳಲ್ಲಿ ಬ್ಲಾಕ್ ಫಂಗಸ್ ಕಂಡುಬಂದಿದೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಖಚಿತಪಡಿಸಿದ್ದಾರೆ.

Manipal Seven Persons have been Tested Positive to Black Fungus first ever in Udupi, Karnataka.