ಬ್ರೇಕಿಂಗ್ ನ್ಯೂಸ್
22-05-21 09:40 pm Mangaluru Correspondent ಕರಾವಳಿ
ಮಂಗಳೂರು, ಮೇ 22: ಕೊರೊನಾ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತು ಬೆಡ್ ಗಳ ಉಚಿತ ಚಿಕಿತ್ಸೆ ಆದೇಶವನ್ನು ತಕ್ಷಣ ಜಾರಿಗೆ ತರಬೇಕು. ಆಯುಷ್ಮಾನ್ ಯೋಜನೆಯಡಿ ಐಸಿಯು, ವೆಂಟಿಲೇಟರ್ ಬೆಡ್ ಗಳಲ್ಲಿ ಉಚಿತ ಚಿಕಿತ್ಸೆ ನೀಡಲು ನಿರಾಕರಿಸುವ ಮತ್ತು ಸರಕಾರ ನಿಗದಿಪಡಿಸಿದ ದರವನ್ನು ಮೀರಿ ಕೊರೊನಾ ರೋಗಿಗಳಿಗೆ ದುಬಾರಿ ಬಿಲ್ ವಿಧಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಮ್ಇ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆಗ್ರಹಿಸಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮನೆ ಮನೆ ಪ್ರತಿಭಟನೆ ನಡೆಯಿತು.
ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಐವತ್ತು ಶೇಕಡಾ ಬೆಡ್ ಗಳನ್ನು ಸರಕಾರಿ ಕೋಟಾದಡಿ ಮೀಸಲಿಟ್ಟು ಉಚಿತ ಚಿಕಿತ್ಸೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ಆದೇಶ ಇಷ್ಟರ ವರೆಗೆ ಜಾರಿಗೆ ಬಂದಿಲ್ಲ. ಕೇವಲ ವೆನ್ ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮಾತ್ರ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರ ತೆತ್ತು ಚಿಕಿತ್ಸೆ ಪಡೆಯುವ ಅನಿವಾರ್ಯ ಸ್ಥಿತಿಗೆ ಜನಸಾಮಾನ್ಯರನ್ನು ದೂಡಿದೆ. ಖಾಸಗಿ ಆಸ್ಪತ್ರೆಗಳ ಐಸಿಯು, ವೆಂಟಿಲೇಟರ್ ಬೆಡ್ ಗಳಲ್ಲಿ ಎಪಿಎಲ್, ಬಿಪಿಎಲ್ ತಾರತಮ್ಯವಿಲ್ಲದೆ ಆಯುಷ್ಮಾನ್ ಅಡಿ ಉಚಿತ ಚಿಕಿತ್ಸೆಯ ಆದೇಶ ಜಾರಿಯಾಗಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳು ಸುಳ್ಳು ಆಂಕಿ ಅಂಶಗಳನ್ನು ಬಳಸಿಕೊಂಡು ಆಯುಷ್ಮಾನ್ ಅಡಿ ಚಿಕಿತ್ಸೆ ನಿರಾಕರಿಸುತ್ತಿವೆ. ಇದಲ್ಲದೆ ಖಾಸಗಿ ಕೋಟಾದ ರೋಗಿಗಳಿಗೆ, ಆಯುಷ್ಮಾನ್ ಯೋಜನೆಯ ರೋಗಿಗಳಿಗೆ ಸರಕಾರ ನಿಗದಿಪಡಿಸಿದ ದರ ಮಾತ್ರವಲ್ಲದೆ ನಿಯಮ ಬಾಹಿರವಾಗಿ ಲಕ್ಷಾಂತರ ರೂಪಾಯಿ ಅಕ್ರಮ ಬಿಲ್ ವಿಧಿಸುವ, ದುಬಾರಿ ಔಷಧಿಗಳನ್ನು ಖರೀದಿಸುವಂತೆ ಬಲವಂತ ಮಾಡುವ ಘಟನೆಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿವೆ. ಇದರಿಂದ ಕೊರೊನಾ ಸೋಂಕಿತ ರೋಗಿಗಳು ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಖಾಸಗಿ ಆಸ್ಪತ್ರೆಗಳ ಪ್ರಬಲ ಲಾಬಿ ಯಾವುದೇ ಹಿಂಜರಿಕೆ ಇಲ್ಲದೆ ಮುಂದುವರಿದಿದೆ.
ಈ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಐವತ್ತು ಶೇಕಡಾ ಬೆಡ್ ಗಳನ್ನು ಸರಕಾರಿ ಕೋಟಾದಡಿ ಉಚಿತ ಚಿಕಿತ್ಸೆ ನೀಡುವ ಆದೇಶ ಜಾರಿಗೊಳಿಸುವುದು, ನಿಯಮ ಬಾಹಿರವಾಗಿ ದುಬಾರಿ ಬಿಲ್ ವಿಧಿಸುವ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಒತ್ತಾಯಿಸಿ ಡಿವೈಎಫ್ಐ ವತಿಯಿಂದ ಮನೆ ಮನೆ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ನೀಡಿದ್ದ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಹಲವಾರು ಕಡೆ ಜನ ಸ್ವಯಂಪ್ರೇರಿತವಾಗಿ ತಮ್ಮ ಮನೆಯ ಮುಂದೆ ಭಿತ್ತಿಪತ್ರ ಹಿಡಿದು ನಿಂತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
There have been complaints from various parts of the state about private hospitals making out huge bills for treating coronavirus patients. Therefore DYFI held a unique protest at homes demanding govt to take action and save lives.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm