ಬ್ರೇಕಿಂಗ್ ನ್ಯೂಸ್
23-05-21 09:10 pm Mangaluru Correspondent ಕರಾವಳಿ
ಮಂಗಳೂರು, ಮೇ 23: ಎಂಆರ್ ಪಿ ಎಲ್ ಉದ್ಯೋಗ ನೇಮಕಾತಿಗೆ ತಡೆ, ಮುಂದಿನ ಆಯ್ಕೆ ಪ್ರಕ್ರಿಯೆ ಸ್ಥಳೀಯ ಸಂಸದರು, ಶಾಸಕರ ಜೊತೆಗೆ ಚರ್ಚಿಸಿ ನಿರ್ಧಾರ ಎಂಬ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಎದ್ದು ಬಂದಿರುವ ಆಕ್ರೋಶದಿಂದ ಪಾರಾಗಲು ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿಯ ಶಾಸಕರು ಆಡಿರುವ ಹೊಸ ನಾಟಕ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಸಂಸದರು, ಶಾಸಕರುಗಳಿಗೆ ನಿಜಕ್ಕೂ ಕಾಳಜಿ ಇದ್ದರೆ ರಾಜ್ಯ ಬಿಜೆಪಿ ಸರಕಾರ ನೇಮಕಾತಿಗಳಲ್ಲಿ ಸ್ಥಳೀಯರಿಗೆ 80 ಶೇಕಡಾ ಮೀಸಲಾತಿ ಕಡ್ಡಾಯಗೊಳಿಸಿ ಹೊಸ ಕಾಯ್ದೆ ತರುವಂತೆ ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.
ಎಮ್ ಆರ್ ಪಿಎಲ್ ಸಹಿತ ಕರಾವಳಿ ಜಿಲ್ಲೆಗಳ ವಿವಿಧ ಸಾರ್ವಜನಿಕ, ಖಾಸಗಿ ರಂಗದ ಉದ್ಯಮಗಳಲ್ಲಿ ಸ್ಥಳೀಯರಿಗೆ ಆದ್ಯತೆಯಲ್ಲಿ ಉದ್ಯೋಗ ದೊರಕಿಸಿಕೊಡುವಂತೆ, ಅದಕ್ಕಾಗಿ ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಒಳಗೊಂಡ ಕಾಯ್ಧೆಯನ್ನು ರೂಪಿಸುವಂತೆ ಡಿವೈಎಫ್ಐ ಒತ್ತಾಯಿಸುತ್ತಲೇ ಬಂದಿದೆ. 2019 ರಲ್ಲಿ ಎಮ್ ಆರ್ ಪಿ ಎಲ್ 224 ಹುದ್ದೆಗಳ ನೇಮಕಾತಿಗೆ ಸ್ಥಳೀಯರಿಗೆ ಯಾವ ಆದ್ಯತೆಯನ್ನೂ ಒದಗಿಸದೆ ರಾಷ್ಟ ಮಟ್ಟದಲ್ಲಿ ಜಾಹೀರಾತು ನೀಡಿ ಅರ್ಜಿ ಆಹ್ವಾನಿಸಿತ್ತು. ಆಗಲೇ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸ್ಥಳೀಯರಿಗೆ ಆದ್ಯತೆ ಒದಗಿಸದ ಈ ನೇಮಕಾತಿ ಪ್ರಕ್ರಿಯೆಯನ್ನು ತಡೆಯುವಂತೆ, ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಒಳಗೊಂಡು ಹೊಸತಾಗಿ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿತ್ತು. ಈ ಕುರಿತು ಕಾಯ್ದೆ ರೂಪಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿತ್ತು. ಕಾರ್ಮಿಕ ಸಂಘಟನೆಗಳು ಸ್ಥಳೀಯ ಸಂಸದರು, ಶಾಸಕರು, ಉಸ್ತುವಾರಿ ಸಚಿವರಿಗೆ ಮನವಿಯನ್ನೂ ಸಲ್ಲಿಸಿದ್ದವು. ಆಗ ಪ್ರತಿಕ್ರಿಯಿಸದೆ ಮೌನವಾಗಿದ್ದ ಜನಪ್ರತಿನಿಧಿಗಳೇ ಇಂದಿನ ಈ ಘೋರ ಅನ್ಯಾಯಕ್ಕೆ ಕಾರಣ. ಈಗ ಜನಾಕ್ರೋಶ ಭುಗಿಲೆದ್ದಿರುವಾಗ ಕಂಪೆನಿಯ ಎಂಡಿಯ ಭೇಟಿ, ಮಾತುಕತೆ, ನೇಮಕಾತಿಗೆ ತಡೆ ಎಂಬ ಮಾತುಗಳಿಂದ ಯಾವ ಪ್ರಯೋಜನವೂ ಇಲ್ಲ. ಈಗಾಗಲೇ ಆಯ್ಕೆಗೊಂಡಿರುವ 184 ಜನ ಹೊರ ರಾಜ್ಯದವರಿಗೆ ನೇಮಕಾತಿ ಪತ್ರವೂ ಕೈಸೇರಿದ್ದು ಬಹುತೇಕ ಮಂದಿ ಕಂಪೆನಿ ಕೆಲಸಕ್ಕೂ ಸೇರಿಕೊಂಡಿದ್ದಾರೆ. ಹಾಗಿದ್ದರೂ ಇಂತಹ ನಾಟಕಗಳನ್ನಾಡುವ ಮೂಲಕ ಆಕ್ರೋಶಿತ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಈ ರೀತಿ ಮಾಡುತ್ತಿರುವ ಕರಾವಳಿ ಜನರಿಗೆ ಅನ್ಯಾಯ ಮಾಡಿದಂತೆ ಎಂದು ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸ್ಥಳೀಯ ಬಿಜೆಪಿ ಶಾಸಕರುಗಳಿಗೆ ನಿಜಕ್ಕೂ ಕಾಳಜಿ, ಪ್ರಾಮಾಣಿಕತೆ ಇದ್ದರೆ, ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳ ಆಧಾರದಲ್ಲಿ ಖಾಸಗಿ, ಸಾರ್ವಜನಿಕ ರಂಗದ ಉದ್ಯಮಗಳಲ್ಲಿ ಸ್ಥಳೀಯರಿಗೆ ನೇಮಕಾತಿಯಲ್ಲಿ ಮೀಸಲಾತಿ ಒದಗಿಸಿ ತಮ್ಮದೇ ಕರ್ನಾಟಕ ರಾಜ್ಯ ಸರಕಾರ ಹೊಸ ಕಾಯ್ದೆ ರಚಿಸುವಂತೆ ಮಾಡಲಿ, ತಕ್ಷಣಕ್ಕೆ ಸುಗ್ರೀವಾಜ್ಞೆ ಹೊರಡಿಸಲಿ. ಅದು ಮಾತ್ರ ಎಂಆರ್ ಪಿಎಲ್ ನ 224 ಉದ್ಯೋಗಗಳನ್ನು ಸ್ಥಳೀಯರಿಗೆ ಒದಗಿಸಿಕೊಡಲಿದೆ, ಭವಿಷ್ಯದಲ್ಲಿಯೂ ಕರ್ನಾಟಕದ ಯುವಜನತೆಗೆ ನಾಡಿನಲ್ಲಿ ಸೃಷ್ಟಿಯಾಗುವ ಉದ್ಯೋಗದದಲ್ಲಿ ಹಕ್ಕು ಒದಗಿಸಲಿದೆ, ಡಿವೈಎಫ್ಐ ಈ ಕುರಿತು ಸತತವಾಗಿ ಧ್ವನಿ ಎತ್ತುತ್ತಲೇ ಬಂದಿದೆ. ಅದರ ಹೊರತಾದ ಈ ರೀತಿಯ ಕ್ರಮಗಳು ಕೇವಲ ಕಣ್ಣೊರೆಸುವ ನಕಲಿ ನಾಟಕಗಳು ಮಾತ್ರ ಎಂದು ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore Hold on Job placements for outsiders in MRPL is a drama by Naleen Kumar Kateel and BJP leaders Slams Muneer Katipala of DYFI. Naleen Kumar Kateel had promised of Job opportunities to the youths of Mangalore but when placements were given to outsiders people took it on Social Media to slams MP.
26-11-24 10:46 pm
Bangalore Correspondent
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
27-11-24 11:04 pm
Mangalore Correspondent
Muneer Katipalla, Mangalore, Anupam Agarwal;...
27-11-24 09:36 pm
Dr Chinnappa Gowda, Mangalore: 25 ಕೋಟಿ ವ್ಯಯಿಸ...
27-11-24 08:50 pm
Mangalore MP Captain Brijesh Chowta, Chouhan...
27-11-24 08:39 pm
Mangalore News: ಬ್ರಿಟಿಷರ ಕಾಲದ ಜಿಲ್ಲಾಧಿಕಾರಿ ಕಚ...
27-11-24 08:28 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm