ಬ್ರೇಕಿಂಗ್ ನ್ಯೂಸ್
26-05-21 05:37 pm Mangalore Correspondent ಕರಾವಳಿ
ಉಳ್ಳಾಲ, ಮೇ 26: ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕೊಂಡಾಣ ಕ್ಷೇತ್ರದ ಆಡಳಿತ ಕಮಿಟಿ ಮತ್ತು ಸ್ಥಳೀಯ ಮುತ್ತಣ್ಣ ಶೆಟ್ಟಿ ತಂಡದ ನಡುವೆ ನಡೆಯುತ್ತಿರುವ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಇಂದು ಪೊಲೀಸ್ ಕಮೀಷನರ್ ಶಶಿಕುಮಾರ್ ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಮೊಬೈಲಲ್ಲಿ ಫೋಟೋ ಕ್ಲಿಕ್ಕಿಸಿದ ಯುವಕನ ಸೆಲ್ ಫೋನನ್ನ ಉಳ್ಳಾಲ ಪಿಎಸ್ ಐ ಶಿವಕುಮಾರ್ ವಶಕ್ಕೆ ಪಡೆದು ದರ್ಪ ತೋರಿದ್ದಾರೆ.
ಕೊಂಡಾಣ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಮತ್ತು ಕ್ಷೇತ್ರದ ಅನುವಂಶಿಕ ಗುರಿಕಾರರೆಂದು ಹೇಳಲ್ಪಡುವ ಮುತ್ತಣ್ಣ ಶೆಟ್ಟಿಯವರ ನಡುವೆ ವಿವಾದ ಏರ್ಪಟ್ಟಿದ್ದು ಪ್ರಕರಣ ಉಳ್ಳಾಲ ಠಾಣೆಯ ಮೆಟ್ಟಿಲೇರಿದೆ. ಕಳೆದ ಮೇ 23 ರಂದು ಮುತ್ತಣ್ಣ ಶೆಟ್ಟರು ಬೇರೆ ಅರ್ಚಕರನ್ನು ಕರೆದುಕೊಂಡು ಬಂದು ಭಂಡಾರ ಮನೆಗೆ ವ್ಯವಸ್ಥಾಪನಾ ಸಮಿತಿ ಹಾಕಿದ ಬೀಗವನ್ನು ಒಡೆದು ಪೂಜೆ ನೆರವೇರಿಸಿದ್ದರ ವಿರುದ್ಧ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.



ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ಕೊಂಡಾಣ ಕ್ಷೇತ್ರದ ಭಂಡಾರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಸಾಯಿ ತೇಜಸ್ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಫೋಟೊ ಕ್ಲಿಕ್ಕಿಸುತ್ತಿದ್ದು ಆತನನನ್ನ ಕಮಿಷನರ್, ಯಾರಪ್ಪಾ ನೀನೆಂದು ಕೇಳಿದ್ದಾರೆ. ಕಮಿಷನರ್ ಅಷ್ಟು ಹೇಳಲು ತಡ, ಸ್ಥಳದಲ್ಲಿದ್ದ ಉಳ್ಳಾಲ ಠಾಣಾ ಪಿಎಸ್ಐ ಶಿವಕುಮಾರ್ ಯುವಕನ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಫೋಟೊ ಕ್ಲಿಕ್ಕಿಸಿದ ಯುವಕ ಕೊಂಡಾಣ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಕಡೆಯವನಾಗಿದ್ದು, ಸ್ಥಳದಲ್ಲಿದ್ದ ವ್ಯವಸ್ಥಾಪನಾ ಮಂಡಳಿ ಅಧ್ಯಕ್ಷರು, ಸದಸ್ಯರು ಪಿಎಸ್ ಐ ದರ್ಪವನ್ನು ಕಣ್ಣಾರೆ ಕಂಡು ಮೂಕ ಪ್ರೇಕ್ಷಕರಾಗಿದ್ದರು. ಕೊನೆಗೆ, ಯುವಕನ ಮೊಬೈಲನ್ನು ಹಿಂತಿರುಗಿಸದೆ ಎಸ್ಐ ಠಾಣೆಗೆ ಒಯ್ದಿದ್ದಾರೆ.
ದೈವಸ್ಥಾನದ ಭೇಟಿ ಬಳಿಕ ಪ್ರತಿಕ್ರಿಯಿಸಿದ ಕಮಿಷನರ್, ದೈವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಮುಜರಾಯಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಜರುಗಿಸುತ್ತೇವೆ ಎಂದಿದ್ದಾರೆ.
Ullal Kondana Temple issue Police Commissioner Shashi Kumar Visits temple after issues have raised with the Managing committee of the temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm