ಬ್ರೇಕಿಂಗ್ ನ್ಯೂಸ್
28-05-21 01:28 pm Mangalore Correspondent ಕರಾವಳಿ
ಮಂಗಳೂರು, ಮೇ 28 : ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಸಿಗುವಂತೆ ಪರೀಕ್ಷೆ ಮತ್ತು ಸ್ಥಳದಲ್ಲಿಯೇ ಚಿಕಿತ್ಸೆ ನೀಡುವುದಕ್ಕಾಗಿ ಹಾಗೂ ಅವಶ್ಯಕತೆಯುಳ್ಳವರಿಗೆ ವೈದ್ಯಕೀಯ ಕಿಟ್ ಗಳನ್ನು ವಿತರಿಸುವುದು ಮುಂತಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲಿನಿಕ್ ಒಳಗೊಂಡ “ವೈದ್ಯರ ನಡೆ, ಹಳ್ಳಿಗಳ ಕಡೆ" ಎಂಬ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಮಾಡಿದ್ದಾರೆ.
ಸ್ಥಳೀಯ ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ, ವ್ಯಕ್ತಿಗಳನ್ನು ಸಂದರ್ಶಿಸಿ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಸೂಕ್ತ ತಪಾಸಣೆಗೆ ಒಳಪಡಿಸಲು ಸಂಚಾರಿ ಕ್ಲಿನಿಕ್ ತಂಡಕ್ಕೆ ಶಿಫಾರಸು ಮಾಡಬೇಕು. ಗ್ರಾಮದ ಪ್ರತಿ ನಾಗರಿಕರೂ ಕೋವಿಡ್ -19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ “ವೈದ್ಯರ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಪ್ರಾರಂಭಿಸಲು ಕನಿಷ್ಠ ಎರಡು ದಿನಗಳ ಮುಂಚಿತವಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡಬೇಕು. ಮೊಬೈಲ್ ಕ್ಲಿನಿಕ್ ವಾಹನವು ಪ್ರತಿ ದಿನವು 3 ರಿಂದ 4 ಹಳ್ಳಿಗಳಿಗೆ ಭೇಟಿ ನೀಡಿ, ಸ್ಥಳದಲ್ಲಿಯೇ ಕೋವಿಡ್ ತಪಾಸಣೆಯನ್ನು ಕೈಗೊಳ್ಳುವಂತೆ ಗುರಿ ನಿಗದಿಪಡಿಸಿ, ಮುಂದಿನ ಅವಧಿಯಲ್ಲಿ ಯಾವ ಗ್ರಾಮಕ್ಕೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಯೋಜನೆ ರೂಪಿಸಿಕೊಳ್ಳಬೇಕು.
ತಪಾಸಣೆ ಬಳಿಕ ರೋಗಿ ಕೋವಿಡ್ ಕೇರ್ ಸೆಂಟರ್ ನಲ್ಲಿರಬೇಕೇ ಅಥವಾ ಹೋಂ ಐಸೊಲೇಶನ್ ನಲ್ಲಿರಬೇಕೇ ಎಂಬ ನಿರ್ಧಾರವನ್ನು ವೈದ್ಯರು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆ ನೀಡುವುದು ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಉದ್ದೇಶ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Every Village in Dakshina Kannada to have Covid-19 Doctors for testing said Mangalore DC Rajendra Kumar to spread the control of Virus.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm