ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆ

29-05-21 04:04 pm       Mangalore Correspondent   ಕರಾವಳಿ

ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Photo credits : Representative Image

ಬೆಂಗಳೂರು, ಮೇ 29: ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಂಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ವಾರ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗುರುವಾರ ಕೇರಳದ ಕಾಯಂಕುಳಂ ಮತ್ತು ಅಲಪ್ಪುಳದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ನೆಡುಮಂಗದ್ ಮತ್ತು ಥಿರುವಿಲ್ಲಾದಲ್ಲಿ 8 ಸೆಂ.ಮೀ ಮಳೆ, ಪೀರ್ಮಡೆ ಮತ್ತು ಕುಮಾರಕಮ್ ಪ್ರದೇಶದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಒಡಿಶಾದ ಮಾಯೂರ್ ಬಂಜ್ 28 ಸೆಂ.ಮೀ, ಕಿಯೊಂಜಿಘರ್ 27 ಸೆಂ.ಮೀ, ಸುಂದರ್ ಘರ್ 21 ಸೆಂ.ಮೀ, ಮಳೆಯಾಗಿದೆ. ಜಾರ್ಖಂಡ ಪಶ್ಚಿಮ ಸಿಂಘುಮ್ 21 ಸೆಂ.ಮೀ ಮತ್ತು ರಾಂಚಿಯಲ್ಲಿ 18 ಸೆಂಟಿ ಮೀಟರ್ ಮಳೆ ಸುರಿದಿದೆ.

ಮೂರು ದಿನ ಅಧಿಕ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Cyclone Yaas to Produce rainfall in some districts of Karnataka including Dakshina Kannada