ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm