ಬ್ರೇಕಿಂಗ್ ನ್ಯೂಸ್
29-08-20 01:00 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 29: ಉಳ್ಳಾಲದ ಕೋಡಿ ಬಳಿಯ ಸೇನೆರೆಬೈಲಿನಲ್ಲಿ ಸ್ಥಳೀಯರ ವಿರೋಧದ ಮಧ್ಯೆ ಭಾರೀ ಪೊಲೀಸ್ ಭದ್ರತೆಯಲ್ಲಿ ದ್ರವ ತ್ಯಾಜ್ಯ ಸಂಸ್ಕರಣಾ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಏಳು ವರ್ಷಗಳ ಹಿಂದೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ನಿರ್ಮಾಣಕ್ಕಾಗಿ ರಾಜ್ಯ ಸರಕಾರದಿಂದ 70 ಕೋಟಿ ಅನುದಾನ ಬಿಡುಗಡೆಗೊಂಡು ನಗರದಾದ್ಯಂತ ಪೈಪ್ ಲೈನ್ ಅಳವಡಿಸಲಾಗಿತ್ತು. ಅದರಂತೆ, ನಗರ ವ್ಯಾಪ್ತಿಯ ಸೇಣೆರೆಬೈಲು, ಕಲ್ಲಾಪು, ಹೊಸಗದ್ದೆ ಎಂಬ ಮೂರು ಪ್ರದೇಶಗಳಲ್ಲಿ ದ್ರವ ತ್ಯಾಜ್ಯ ಸಂಸ್ಕರಣೆ ಮತ್ತು ಶುದ್ದೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಆದರೆ ಸ್ಥಳೀಯ ನಿವಾಸಿಗಳು ದ್ರವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು.
ಇದೀಗ ಸೇಣೆರೆಬೈಲಿನಲ್ಲಿ ಘಟಕ ನಿರ್ಮಾಣಕ್ಕೆ ಕೋರ್ಟ್ ಅವಕಾಶ ಕೊಟ್ಟಿದ್ದರಿಂದ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿದ್ದು ಘಟಕವನ್ನು ಬೇರೆ ಕಡೆ ಸ್ಥಳಾಂತರಿಸಬೇಕು ಎಂದು ಸ್ಥಳೀಯ ಮುಖಂಡರ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿತ್ತು. ಆದರೆ ನಗರಸಭೆ ಅಧಿಕಾರಿಗಳು, ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸಿಪಿ ಅರುಣಾಂಶುಗಿರಿ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವಹಿಸಲಾಗಿತ್ತು.
ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ದ್ರವತ್ಯಾಜ್ಯ ಶುದ್ಧೀಕರಿಸುವ ನಿಟ್ಟಿನಲ್ಲಿ ಸೇನರಬೈಲಿನಲ್ಲಿ ನೂತನ ಘಟಕ ನಿರ್ಮಿಸಲಾಗುತ್ತಿದೆ. ಆದರೆ, ಇದರಿಂದ ಆಗಬಹುದಾದ ತೊಂದರೆಗಳಿಂದ ಆತಂಕಕ್ಕೀಡಾಗಿರುವ ಸ್ಥಳೀಯ ನಿವಾಸಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು. ನಿಗದಿತ ಪ್ರದೇಶ ಜನವಸತಿಯಿಂದ ಕೂಡಿದ್ದು 300 ಮೀಟರ್ ಅಂತರದಲ್ಲಿ ಸುಮಾರು ಏಳು ಸಾವಿರ ಜನಸಂಖ್ಯೆ ಇದ್ದಾರೆ. ಮೂರು ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಆರು ಮಸೀದಿಗಳು, ಮೂರು ದೇವಸ್ಥಾನಗಳಿದ್ದು ಸ್ಥಳ ಗುರುತಿಸುವ ಸಂದರ್ಭ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಲಾಗಿತ್ತು. ಈ ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಖಾನೆಗಳಿಂದ ಕಲುಷಿತ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಈಗಾಗಲೇ ಪರಿಸರ ಕಲುಷಿತಗೊಂಡಿದೆ. ಒಳಚರಂಡಿ ತ್ಯಾಜ್ಯ ಶುದ್ದೀಕರಣ ಘಟಕ ನಿರ್ಮಾಣಗೊಂಡರೆ ವಾಯು ಮಾಲಿನ್ಯ, ಪರಿಸರ ಮಾಲಿನ್ಯ ಹೆಚ್ಚಾಗಿ ದುರ್ವಾಸನೆಯಿಂದ ಚರ್ಮರೋಗ, ಸಾಂಕ್ರಾಮಿಕ ರೋಗ ಹರಡುವ ಅಪಾಯವಿದೆ ಎಂದು ಕೋರ್ಟ್ ಮೆಟ್ಟಿಲೇರಿದ್ದರು.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm