ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm