ಬ್ರೇಕಿಂಗ್ ನ್ಯೂಸ್
05-06-21 05:16 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯ ಸರಕಾರ ಕೋವಿಡ್ ಪ್ಯಾಕೇಜ್ ಘೋಷಣೆ ಮಾಡಿದ್ದು ಜಿಲ್ಲೆಯಾದ್ಯಂತ ಇರುವ ಅಸಂಘಟಿತ ಕಾರ್ಮಿಕರು ತಲಾ ಎರಡು ಸಾವಿರ ರೂ. ಪರಿಹಾರ ಪಡೆಯಲು ಅರ್ಹರಿದ್ದಾರೆ. ಇದಕ್ಕಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಕಾರ್ಮಿಕರು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಅಧಿಕಾರಿಗಳಿಗೆ ಈ ಬಗ್ಗೆ ಜಿಲ್ಲಾಧಿಕಾರಿಗಳೇ ಸೂಚನೆ ನೀಡಿದ್ದಾರೆ. ಕ್ಷೌರಿಕರು, ಟೈಲರ್, ಕಬ್ಬಿಣ ಮತ್ತು ಚಿನ್ನದ ಕೆಲಸಗಾರರು, ಕ್ಲೀನಿಂಗ್ ಕೆಲಸಗಾರರು, ಕಟ್ಟಡ ಕಾರ್ಮಿಕರು, ಮೇಸ್ತ್ರಿಗಳು, ಗುಜರಿ ಹೆಕ್ಕುವವರು, ಲೋಡಿಂಗ್ – ಅನ್ ಲೋಡಿಂಗ್ ಕೆಲಸ ಮಾಡುವವರು ಹೀಗೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ 18ರಿಂದ 65 ವರ್ಷದ ಒಳಗಿನವರು ಈ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬಹುದು. ಹತ್ತಿರದ ಸೇವಾಸಿಂಧು ಕಚೇರಿಯಲ್ಲಿ ಈ ಕುರಿತ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಬ್ಯಾಂಕ್ ಖಾತೆ ಜೊತೆಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್, ಜೊತೆಗೆ ಉದ್ಯೋಗ ಮಾಡುತ್ತಿರುವುದಕ್ಕೆ ಪ್ರಮಾಣ ಪತ್ರವನ್ನೂ ಒದಗಿಸಬೇಕು. ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿದ್ದವರು ಪ್ರಮಾಣ ಪತ್ರ ಸಲ್ಲಿಸಬೇಕಿಲ್ಲ.


ಕಾರ್ಮಿಕ ಇಲಾಖೆಯ ನೋಂದಣಿ ಪತ್ರ ಇಲ್ಲದೇ ಇದ್ದಲ್ಲಿ ಸರಕಾರಿ ಅಧಿಕಾರಿಯಿಂದ ಸಹಿ ಮಾಡಿಸಿದ ಸ್ವಪ್ರಮಾಣ ಪತ್ರವನ್ನು ಸಲ್ಲಿಸಬೇಕು. ನೋಂದಣಿ ಪತ್ರ ಇಲ್ಲದ ಕ್ಷೌರಿಕರು ಅಥವಾ ಇನ್ನಾವುದೇ ವೃತ್ತಿ ಮಾಡುತ್ತಿರುವುದಕ್ಕೆ ನಗರ ಭಾಗದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಇನ್ನಿತರ ಅಧಿಕಾರಿಗಳು, ಪಂಚಾಯತ್ ಮಟ್ಟದಲ್ಲಿ ಗ್ರಾಪಂ ಪಿಡಿಓ, ಸೆಕ್ರಟರಿ, ಲೇಬರ್ ಇನ್ ಸ್ಪೆಕ್ಟರ್ ಇನ್ನಿತರ ಅಧಿಕಾರಿಗಳ ದೃಢೀಕರಣ ಬೇಕಾಗುತ್ತದೆ. ಕಾರ್ಮಿಕ ಇಲಾಖೆಯ ಕಾರ್ಡ್ ಇದ್ದಲ್ಲಿ ಇನ್ನಿತರ ದಾಖಲೆಗಳ ಅಗತ್ಯವಿರುವುದಿಲ್ಲ. ಮೊದಲೇ ಬ್ಯಾಂಕ್ ಖಾತೆ ಲಿಂಕ್ ಆಗಿರುವುದರಿಂದ ಅವರ ಖಾತೆಗೇ ಹಣ ಸಂದಾಯ ಆಗಲಿದೆ.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 86 ಸಾವಿರ ಮಂದಿ ಕಟ್ಟಡ ಕಾರ್ಮಿಕರಿದ್ದು 7597 ಮಂದಿ ಅಸಂಘಟಿತ ವಲಯದ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಲೇಬರ್ ಕಾರ್ಡ್ ಇರುವ ಕಟ್ಟಡ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಿಲ್ಲ. ಅವರ ಖಾತೆಗೂ ನೇರವಾಗಿ ಪರಿಹಾರದ ಹಣ ಜಮಾ ಆಗಲಿದೆ. ಇನ್ನು ಕಳೆದ ಬಾರಿ ಪರಿಹಾರ ಸಿಗದೇ ಇರುವ ಕ್ಷೌರಿಕರು, ಕ್ಲೀನಿಂಗ್ ಕೆಲಸ ಮಾಡುವ ಮಂದಿ ಸೇವಾಸಿಂಧು ಪೋರ್ಟಲ್ ನಲ್ಲಿ ಮತ್ತೊಮ್ಮೆ ಅರ್ಜಿ ಹಾಕಲು ಅವಕಾಶವಿದೆ.

ಹೊರಜಿಲ್ಲೆಗಳಿಂದ ಆಗಮಿಸಿ ಜಿಲ್ಲೆಯಲ್ಲಿ ಕಟ್ಟಡ ಕೆಲಸ ಇನ್ನಿತರ ಕೆಲಸ ಮಾಡುತ್ತಿದ್ದು, ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದರೆ ಅಂಥವರು ಕೂಡ ಪರಿಹಾರ ಪಡೆಯಲು ಅರ್ಹರಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಅಥವಾ ಲೇಬರ್ ಕಾರ್ಡ್ ಇದ್ದು ಯಾವುದೇ ರೀತಿಯ ಕಾರ್ಮಿಕ ಕೆಲಸ ಮಾಡುತ್ತಿದ್ದರೂ ಅವರಿಗೆ ಪರಿಹಾರ ಕೊಡಿಸುವ ಜವಾಬ್ದಾರಿ ಆಯಾ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ತಿಳಿಸಿದ್ದಾರೆ.
ಜಿಪಂ ಸಿಇಓ ಕುಮಾರ್, ನಗರ ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ನಾಯಕ್, ಕಾರ್ಮಿಕ ಇಲಾಖೆ ಅಧಿಕಾರಿ ವಿಲ್ಮಾ, ಹಲವು ಕಾರ್ಮಿಕ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.
Deputy Commissioner Dr. Rajendra K V said that the state government will give an amount of Rs 2,000 from the Covid package to laborers of the unorganized sector as they are facing difficulties due to the lockdown.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm