ಬ್ರೇಕಿಂಗ್ ನ್ಯೂಸ್
05-06-21 09:06 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಮಂಗಳೂರಿನಲ್ಲಿ ಅತಿ ಹೆಚ್ಚು ಮೆಡಿಕಲ್ ಕಾಲೇಜು ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳಿರುವ ಆಸ್ಪತ್ರೆ ಇರುವ ಕಾರಣವೋ ಏನೋ, ಬ್ಲಾಕ್ ಫಂಗಸ್ ಸೋಂಕಿತರು ಮಂಗಳೂರಿನ ಆಸ್ಪತ್ರೆಗಳಲ್ಲಿ ಹೆಚ್ಚುತ್ತಿದ್ದಾರೆ. ಇದರಿಂದ ದಿನದಿಂದ ದಿನಕ್ಕೆ ಬ್ಲಾಕ್ ಫಂಗಸ್ ಸೋಂಕಿತರು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 5ರ ಶನಿವಾರದ ವರೆಗೆ 50 ಮಂದಿ ಬ್ಲಾಕ್ ಫಂಗಸ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಂದೇ ದಿನ ಆರು ಹೊಸ ಶಿಲೀಂಧ್ರ ಸೋಂಕಿನ ಪ್ರಕರಣಗಳು ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಾಗಿವೆ. ಅದರಲ್ಲಿ ಇತರ ಜಿಲ್ಲೆಯವರು ನಾಲ್ಕು ಮಂದಿಯಾದರೆ, ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರಿದ್ದಾರೆ. ಒಟ್ಟು 50 ಮಂದಿ ಸೋಂಕಿತರಲ್ಲಿ 11 ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರೇ ಆಗಿದ್ದಾರೆ. ಇತರ ಜಿಲ್ಲೆಯ ಸೋಂಕಿತರು ಮಂಗಳೂರಿನ ಆಸ್ಪತ್ರೆಗಳಲ್ಲಿ 39 ಮಂದಿ ಇದ್ದಾರೆ.
ಗಂಭೀರ ವಿಚಾರ ಏನಂದ್ರೆ, ಕಳೆದ ಒಂದು ತಿಂಗಳಲ್ಲಿ ಬ್ಲಾಕ್ ಫಂಗಸ್ ಸೋಂಕಿತ ಮೂರು ಮಂದಿ ಮಾತ್ರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವು ಮೂವರು ಕೂಡ ಇತರ ಜಿಲ್ಲೆಯವರಾಗಿದ್ದು, ಕೆಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಇಬ್ಬರು ಮತ್ತು ಯೇನಪೋಯದ್ಲಲಿ ಒಬ್ಬರು ಗುಣಮುಖರಾಗಿದ್ದಾರೆ.
ಈವರೆಗೆ ಬ್ಲಾಕ್ ಫಂಗಸ್ ಸೋಂಕಿತರಲ್ಲಿ ಏಳು ಮಂದಿ ಸಾವು ಕಂಡಿದ್ದು, ಈ ಪೈಕಿ ಐದು ಮಂದಿ ಇತರ ಜಿಲ್ಲೆಯವರು ಹಾಗೂ ಇಬ್ಬರು ದಕ್ಷಿಣ ಕನ್ನಡ ಜಿಲ್ಲೆಯವರು. ಸದ್ಯಕ್ಕೆ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಅತಿ ಹೆಚ್ಚು ಬ್ಲಾಕ್ ಫಂಗಸ್ ಸೋಂಕಿತರು ಇದ್ದಾರೆ. ಒಂದೇ ಆಸ್ಪತ್ರೆಯಲ್ಲಿ 38 ಮಂದಿಯಿದ್ದು, ಇತರ ಜಿಲ್ಲೆಯವರೇ 32 ಮಂದಿಯಿದ್ದಾರೆ. ದ.ಕ. ಜಿಲ್ಲೆಯ ಆರು ಮಂದಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಳಿದಂತೆ, ಕೆಎಂಸಿ ಜ್ಯೋತಿಯಲ್ಲಿ ಒಬ್ಬರು (ದ.ಕ.), ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಆರು ಮಂದಿ ಇದ್ದಾರೆ. ಅದರಲ್ಲಿ ಹೊರ ಜಿಲ್ಲೆಯವರು 5 ಮತ್ತು ಒಬ್ಬರು ಇದೇ ಜಿಲ್ಲೆಯವರಿದ್ದಾರೆ. ಯೇನಪೋಯ ಆಸ್ಪತ್ರೆಯಲ್ಲಿ ಹೊರ ಜಿಲ್ಲೆಯ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡದ್ದೇ ಇಬ್ಬರು ಇದ್ದಾರೆ. ಮಂಗಳಾ ಹಾಸ್ಪಿಟಲ್ ನಲ್ಲಿ ಹೊರ ಜಿಲ್ಲೆಯ ಒಬ್ಬರು ಚಿಕಿತ್ಸೆಯಲ್ಲಿದ್ದಾರೆ. ಎ.ಜೆ. ಆಸ್ಪತ್ರೆಯಲ್ಲಿ ದಕ್ಷಿಣ ಕನ್ನಡದ್ದೇ ಒಬ್ಬರು ಮಾತ್ರ ಚಿಕಿತ್ಸೆಯಲ್ಲಿದ್ದಾರೆ.
ಎರಡು- ಮೂರು ವಾರಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಅಥವಾ ಕೊರೊನಾ ಚಿಕಿತ್ಸೆಯ ಅಡ್ಡ ಪರಿಣಾಮದಿಂದ ಈ ರೀತಿಯ ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದೆ. ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿ ಗುಣಮುಖರಾಗಿ ಮನೆಗೆ ತೆರಳಿದ ಮಂದಿಯಲ್ಲೂ ಶಿಲೀಂಧ್ರ ಸೋಂಕು ಕಾಣಿಸಿಕೊಂಡಿದೆ. ಸದ್ಯಕ್ಕೆ ಮಂಗಳೂರಿನಲ್ಲಿ ಕಂಡುಬಂದಿರುವ 50 ಪ್ರಕರಣಗಳಲ್ಲಿ 39 ಮಂದಿ ಹೊರ ಜಿಲ್ಲೆಯವರೇ ಆಗಿರುವುದರಿಂದ ಕರಾವಳಿಯಲ್ಲಿ ಹೆಚ್ಚಾಗಿ ಈ ರೀತಿಯ ಸೋಂಕು ಕಂಡುಬಂದಿಲ್ಲ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯದ್ದು.
Spike in Black Fungus Cases in Mangalore. 50 cases reported so far. Wenlock Hospital Reports 38 Cases as of today. As per reports discharge from the hospital so far is just three.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm