ನಾಲ್ಕು ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ; ಕಕ್ಕಿಂಜೆಯಲ್ಲಿ ಆರೋಪಿ ಸೆರೆ

08-06-21 04:39 pm       Headline Karnataka News Network   ಕರಾವಳಿ

ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ. 

ಬೆಳ್ತಂಗಡಿ, ಜೂ.8 : ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದು, ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. 

ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿ. ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಂಧಿತ ಆರೋಪಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

The police arrested a man for sexually assaulting a minor girl under Dharmasthala police station limits. The arrested accused is identified as Vignesh Bhandary. The victim is a four-year-old girl.