ಬ್ರೇಕಿಂಗ್ ನ್ಯೂಸ್
10-06-21 01:49 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಕಡೆಗೂ ಈ ಬಾರಿ ಲಾಕ್ಡೌನ್ ತೆರವಾಗುತ್ತೆ ಎಂದು ಆಸೆಯಿಂದ ಕಾದಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ನಿರಾಶೆಯ ಸುದ್ದಿ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗು ಅಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳೊಂದಿಗೆ ಸಿಎಂ ಸಭೆ ನಡೆಸಿದ್ದು ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹತೋಟಿಗೆ ಬರದ ಕಾರಣ ಮತ್ತೆ ಒಂದು ವಾರ ಲಾಕ್ಡೌನ್ ವಿಸ್ತರಣೆಗೆ ಮನವಿ ಮಾಡಿದ್ದೇವೆ. ಇದರ ಜೊತೆಗೆ, ನಮ್ಮ ಜಿಲ್ಲೆಗೆ ವ್ಯಾಕ್ಸಿನ್ ಪ್ರಮಾಣವನ್ನೂ ಹೆಚ್ಚಿಸಲು ಬೇಡಿಕೆ ನೀಡಿದ್ದೇವೆ. ಆಯಾ ಜಿಲ್ಲೆಗಳಲ್ಲಿ ಲಾಕ್ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಒಪ್ಪಿಗೆ ನೀಡಿದ್ದು ಜೂನ್ 14 ರ ಬಳಿಕ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಕಾಲ ಲಾಕ್ ಡೌನ್ ವಿಸ್ತರಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.


ಇದೇ ವೇಳೆ, ಕೈಗಾರಿಕೆಗಳಿಗೆ ಸ್ವಲ್ಪ ಮಟ್ಟದ ರಿಯಾಯಿತಿ ನೀಡಿ ಲಾಕ್ ಡೌನ್ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಲಾಕ್ಡೌನ್ ವಿಸ್ತರಣೆ ಬಗ್ಗೆ ನಾಳೆ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಂಸದರ ಸಭೆ ಕರೆದು ಜಿಲ್ಲಾ ಮಟ್ಟದಲ್ಲಿ ನಿರ್ಣಯ ಮಾಡಲು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಮಾಹಿತಿ ನೀಡಿದ್ದಾರೆ.
Spike in Covid Cases Lockdown Extended in Dakshina Kannada till 20th June. The decision was taken by Mangaluru DC Dr. Rajendra Kumar. The decision was taken after a Video conference with CM of Karnataka. Eight districts have got the order for extension of Lockdown for a week from June 14th.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 09:48 pm
HK News Staffer
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am