ಬ್ರೇಕಿಂಗ್ ನ್ಯೂಸ್
11-06-21 03:03 pm Mangalore Correspondent ಕರಾವಳಿ
ಮಂಗಳೂರು, ಜೂನ್ 11; ಪಕ್ಕದ ಉಡುಪಿ ಜಿಲ್ಲೆಯಲ್ಲಿ ಲಾಕ್ಡೌನ್ ತೆರವಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಇನ್ನೂ ಕಡಿಮೆಯಾಗಿಲ್ಲ. ಪಾಸಿಟಿವ್ ಪ್ರಮಾಣ ಇಳಿಕೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮತ್ತು ಜಿಲ್ಲೆಯಾದ್ಯಂತ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಲು ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಸೂಚನೆ ನೀಡಿದ್ದಾರೆ.
ಇದಲ್ಲದೆ ನಗರ ಭಾಗದಲ್ಲೂ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಜನರಲ್ಲಿ ಪಾಸಿಟಿವ್ ಪತ್ತೆಯಾದರೂ ಮೂರು ಮಹಡಿಗಳ ನಿವಾಸಿಗಳ ಟೆಸ್ಟಿಂಗ್ ಮಾಡುವಂತೆ ಸೂಚಿಸಲಾಗಿದೆ. ಸೋಂಕಿತರು ವಾಸಿಸುವ ಮಹಡಿ, ಅದರ ಮೇಲಿನ ಮತ್ತು ಕೆಳಗಿನ ಮಹಡಿಗಳಲ್ಲಿ ವಾಸವಾಗಿರುವ ಎಲ್ಲರಿಗೂ ಟೆಸ್ಟ್ ಮಾಡಬೇಕು.
ಇದರ ಜೊತೆಗೆ ಮನೆ ಮತ್ತು ಅಪಾರ್ಟ್‌ಮೆಂಟ್‌ಗಳ ಸುತ್ತ ಕಣ್ಗಾವಲು ಕ್ರಮಕ್ಕೆ ಜಿಲ್ಲಾಧಿಕಾರಿ ಗಳು ಸೂಚನೆ ನೀಡಿದ್ದಾರೆ. ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರು ಮೊಬೈಲ್ ಕೋವಿಡ್ ಟೆಸ್ಟಿಂಗ್ ತಂಡಗಳನ್ನು ರಚಿಸಲಾಗಿದೆ. ಒಂದರಲ್ಲಿ ಇಬ್ಬರು ಲ್ಯಾಬ್ ಟೆಕ್ನಿಶಿಯನ್ ಕಾರ್ಯ ನಿರ್ವಹಣೆ ಮಾಡಲಿದ್ದಾರೆ.
ಮನೆ ಮತ್ತು ಖಾಸಗಿ ಕ್ಲಿನಿಕ್‌ಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಭಾಗಗಳಲ್ಲೂ ಮೊಬೈಲ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ತೆರೆಯಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ. ಸದ್ಯ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,500 ಮಾದರಿಗಳ ಪರೀಕ್ಷೆ ಆಗುತ್ತಿದೆ.
ಇನ್ನು ಮುಂದೆ ನಿತ್ಯ 6 ಸಾವಿರ ಪರೀಕ್ಷೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಅಲ್ಲದೆ, ಎಲ್ಲಾ ಸೋಂಕಿತರ ಪ್ರಾಥಮಿಕ ಸಂಪರ್ಕಗಳನ್ನು ಪತ್ತೆ ಮಾಡಿ ಪರೀಕ್ಷೆ ಮಾಡಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
Spike in Covid Cases in Mangaluru daily six thousand tests to be conducted states Dc Dr. Rajendra Kumar.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm