ಬ್ರೇಕಿಂಗ್ ನ್ಯೂಸ್
12-06-21 04:22 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಅಸಂಘಟಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಟೈಲರ್ ವೃತ್ತಿಯಲ್ಲಿರುವ ಮಂದಿಗೆ ರಾಜ್ಯ ಸರಕಾರದ ಪರಿಹಾರ ಪ್ಯಾಕೇಜ್ ಕೈಗೆಟಕದಂತಾಗಿದೆ. ಟೈಲರ್ ಕೆಲಸ ಮಾಡುವ ಮಂದಿ ತಾವು ಅಸಂಘಟಿತ ಕಾರ್ಮಿಕರು ಎಂದು ತೋರಿಸಲು ಸರಕಾರ ಸೂಚಿಸಿದ ಅಧಿಕಾರಿಗಳ ಬಳಿ ತೆರಳಿದರೆ, ನೀವು ಲೈಸೆನ್ಸ್ ಮಾಡಿದ್ದೀರಾ ಎಂದು ಕೇಳುತ್ತಾರೆ. ನಾವು ಮನೆಯಲ್ಲೇ ಕೆಲಸ ಮಾಡುವುದಾಗಿ ಹೇಳಿದರೂ ವಾಪಸ್ ಕಳುಹಿಸುತ್ತಾರೆ. ಇದರಿಂದಾಗಿ ಟೈಲರ್‌ಗಳಿಗೆ ಸರಕಾರ ಘೋಷಿಸಿದ ಪ್ಯಾಕೇಜ್ ಅನ್ನೋದು ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದ್ದು ಈ ಕುರಿತ ಗೊಂದಲವನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಆನಂದ ಕೆ.ಎಸ್. ಸರಕಾರವನ್ನು ಒತ್ತಾಯಿಸಿದ್ದಾರೆ.
ನಗರದ ಗೋರಿಗುಡ್ಡೆಯಲ್ಲಿರುವ ಟೈಲರ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಕೋವಿಡ್‌ನಿಂದಾಗಿ ಟೈಲರ್‌ಗಳು ಅಂಗಡಿ ಬಾಗಿಲು ತೆರೆಯದೆ ಮನೆಯಲ್ಲಿಯೇ ಉಳಿಯುವಂತಾಗಿದೆ. ಇಂತಹ ಕಷ್ಟದ ಸಮಯದಲ್ಲಿ ಸರಕಾರ ಘೋಷಣೆ ಮಾಡಿದ ಪ್ಯಾಕೇಜ್ ಮೊತ್ತ ಎರಡು ಸಾವಿರ ರೂಪಾಯಿಯನ್ನು ಪಡೆಯಲು ಎಪಿಎಲ್ ಮತ್ತು ಬಿಪಿಎಲ್ ಎಂಬ ಮಾನದಂಡವನ್ನು ನಿಗದಿ ಪಡಿಸಿರುವುದು ತಪ್ಪು. ಇದು ಟೈಲರ್ ವೃತ್ತಿ ಬಾಂಧವರಲ್ಲಿ ತಾರತಮ್ಯ ಮಾಡಿದಂತಾಗಿದೆ. ಸರಕಾರ ಈ ನಿಯಮವನ್ನು ಕೈಬಿಟ್ಟು ಎಲ್ಲಾ ಟೈಲರ್ ಗಳಿಗೂ ಪ್ಯಾಕೇಜ್ ಮೊತ್ತ ನೀಡುವಂತೆ ಅವರು ಒತ್ತಾಯಿಸಿದರು.

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಶನ್ (ಕೆಎಸ್‌ಟಿಎ) ಕಳೆದ 21 ವರ್ಷಗಳಿಂದ ಟೈಲರ್ ವೃತ್ತಿಯವರ ಶ್ರೇಯೋಭಿವೃದ್ದಿಗಾಗಿ ಕೆಲಸ ಮಾಡುತ್ತಿದೆ. ಸಂಘವನ್ನು ವಿಶ್ವಾಸಕ್ಕೆ ಪಡೆದು ಸಂಘಟನೆಯ ಗುರುತು ಕಾರ್ಡ್ ತೋರಿಸಿದರೆ ಅಧಿಕಾರಿಗಳು ಮಾನ್ಯತೆ ನೀಡಿ, ಪ್ಯಾಕೇಜ್ ಮೊತ್ತ ಪಡೆಯಲು ಸಹಕರಿಸಬೇಕು. ಈ ಬಗ್ಗೆ ಸರಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಕೆಎಸ್ ಟಿಎ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಮಾತನಾಡಿ, ಸರಕಾರ ಟೈಲರ್‌ಗಳಿಗೆ ಘೋಷಿಸಿರುವ ಪ್ಯಾಕೇಜ್ ಮೊತ್ತವನ್ನು ಎರಡು ಸಾವಿರದಿಂದ ಐದು ಸಾವಿರಕ್ಕೆ ಏರಿಸಬೇಕೆಂದು ಒತ್ತಾಯಿಸಿದರು. ಈ ಸಂದರ್ಭ ಕೆಎಸ್‌ಟಿಎ ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಬಿ. ವಸಂತ್, ನಗರ ಸಮಿತಿ ಮಾಜಿ ಅಧ್ಯಕ್ಷೆ ಕುಸುಮ ದೇವಾಡಿಗ ಉಪಸ್ಥಿತರಿದ್ದರು.
Mangalore No govt package for tailors association slams govt. We request the govt to consider us as categories of people who are also in distress on account of lockdown.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm