ಬ್ರೇಕಿಂಗ್ ನ್ಯೂಸ್
12-06-21 05:39 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದ್ದರೂ, ಕೇಂದ್ರ ಸರಕಾರ ಪೆಟ್ರೋಲ್ ದರದ ನೆಪದಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಇದನ್ನು ವಿರೋಧಿಸಿ ಜೂನ್ 14ರಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದೆಂದು ಮಾಜಿ ಎಂಎಲ್ಸಿ ಐವನ್ ಡಿಸೋಜ ಹೇಳಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಐವಾನ್ ಡಿಸೋಜ, ಪೆಟ್ರೋಲ್ ದರ ಇತಿಹಾಸದಲ್ಲೇ ಅತ್ಯಂತ ಗರಿಷ್ಠ ಮಟ್ಟಕ್ಕೆ ತಲುಪಿದೆ. ಲೀಟರಿಗೆ 100 ರೂ. ದಾಟಿ ಮುನ್ನಡೆದಿದ್ದರೂ, ಕೇಂದ್ರ ಸರಕಾರ ಸಾಮಾನ್ಯ ಜನರನ್ನು ಮೂರ್ಖರನ್ನಾಗಿಸುವ ಕೆಲಸ ಮಾಡುತ್ತಿದೆ. ದೇಶದ ಅಭಿವೃದ್ಧಿಗಾಗಿ ಸಹಿಸಿಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. ತೈಲ ಬೆಲೆಯಲ್ಲಿ ನಿರಂತರ ಹೆಚ್ಚಳ ಆಗುತ್ತಿರುವುದು ಸಮಾಜದ ಎಲ್ಲ ಕ್ಷೇತ್ರಗಳ ಮೇಲೂ ಪರಿಣಾಮ ಬೀರಿದೆ. ಹಿಂದೆ ಯುಪಿಎ ಸರಕಾರ ಇದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ತೈಲಕ್ಕೆ 140 ಡಾಲರ್ ಆಗಿದ್ದರೂ, ದೇಶದಲ್ಲಿ ಪೆಟ್ರೋಲ್ ಲೀಟರ್ ದರ 70 ರೂಪಾಯಿಗಿಂದ ಮೇಲೆ ಹೋಗಿರಲಿಲ್ಲ. ಆದರೆ, ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಕಡಿಮೆ ಇದ್ದರೂ, ಪೆಟ್ರೋಲ್ ದರ ನೂರು ದಾಟಿದೆ. ಬಡವರು, ಜನಸಾಮಾನ್ಯರ ಬಗ್ಗೆ ಕಾಳಜಿ ಇಲ್ಲದವರು ಮಾತ್ರ ಈ ರೀತಿ ದರ ಹೆಚ್ಚಿಸುತ್ತಾರೆ ಎಂದು ಟೀಕಿಸಿದರು.
ಈಗ ಕೊರೊನಾ ಲಾಕ್ಡೌನ್ ಸಂಕಷ್ಟದಿಂದಾಗಿ ಸಾಮಾನ್ಯ ಜನರು ಹಣ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸ್ಥಿತಿಯಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ದರವನ್ನು ಏರಿಸುತ್ತಿರುವುದು ಏನನ್ನು ಸೂಚಿಸುತ್ತದೆ. ನಮ್ಮ ಜನರು ಮೂರ್ಖರು ಅಂದ್ಕೊಂಡಿದ್ದಾರೆಯೇ.. ಸರಕಾರದ ಈ ರೀತಿಯ ನಿರ್ಲಜ್ಜ ಧೋರಣೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರಕಾರದ ಈ ನಡೆಯನ್ನು ವಿರೋಧಿಸಿ ಜೂನ್ 14ರಂದು ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಯಿಂದ ಸ್ಟೇಟ್ ಬ್ಯಾಂಕ್ ಬಳಿಯ ರಾವ್ ಅಂಡ್ ರಾವ್ ಸರ್ಕಲ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು.
ಪ್ರಧಾನಿ ಮೋದಿಯವರು ಕೊರೊನಾ ಓಡಿಸಲು ಕ್ಯಾಂಡಲ್ ಉರಿಸಲು, ತಪ್ಪಾಳೆ ಹೊಡೆಯಲು ಮತ್ತು ತಟ್ಟೆ ಬಡಿಯಲು ಹೇಳಿದ್ದರು. ನಾವು ಅವರ ಮಾತನ್ನು ಪ್ರತಿಭಟನೆಯಲ್ಲಿ ಯಥಾವತ್ ಪಾಲನೆ ಮಾಡುತ್ತೇವೆ. ತಟ್ಟೆ ಬಡಿದು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದು ಐವಾನ್ ಡಿಸೋಜ ಹೇಳಿದರು. ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಸಾಹುಲ್ ಹಮೀದ್, ಮಹಮ್ಮದ್ ಕುಂಜತ್ ಬೈಲ್, ಅಪ್ಪಿ, ಶುಭೋದಯ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
District Congress led by former MLC Ivan D’Souza will carry out a padayatra from Mallikatte Congress office to Rao & Rao Circle petrol pump on Monday, June 14 protesting against the central government over rising fuel prices.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm