ಬ್ರೇಕಿಂಗ್ ನ್ಯೂಸ್
12-06-21 05:47 pm Mangalore Correspondent ಕರಾವಳಿ
ಉಳ್ಳಾಲ, ಜೂ.12: ಜಗತ್ತಿನಲ್ಲಿ ಚೀನಾಕ್ಕಿಂತ ಭಾರತದಲ್ಲಿ ತಯಾರಾದ ವ್ಯಾಕ್ಸಿನ್ ಗಳನ್ನೇ ಜನರು ಹೆಚ್ಚು ಅಪೇಕ್ಷೆ ಪಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಅವರು ಮುಡಿಪುವಿನಲ್ಲಿ ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಕುರ್ನಾಡು ಶಕ್ತಿಕೇಂದ್ರದ ವತಿಯಿಂದ ಅಂಗನವಾಡಿ ಕಾರ್ಯಕರ್ತರಿಗೆ ಶನಿವಾರ ಮುಡಿಪುವಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ನಾವು ಕೊರೊನಾ ವಿರುದ್ಧ ಸಂಘಟಿತರಾಗಿ ಹೋರಾಡಿದರೆ ಯಾವುದೇ ಅಲೆಯನ್ನು ಹೊಡೆದೋಡಿಸಬಹುದು. ಆತ್ಮಸ್ಥೈರ್ಯದೊಂದಿಗೆ ನಿಯಮಾವಳಿಗಳನ್ನು ಪಾಲಿಸಿಕೊಂಡು ಮುನ್ನಡೆದರೆ ಕೊರೊನಾ ಮೂರನೇ ಅಲೆಯನ್ನು ತಡೆಯಲು ಸಾಧ್ಯ ಎಂದರು. ಭಾರತವು ಆರೋಗ್ಯ, ವೈಜ್ಞಾನಿಕ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡುತ್ತಿದ್ದು, ಚೀನಾದ ವ್ಯಾಕ್ಸಿನ್ ಗಿಂತಲೂ ಭಾರತದ ವ್ಯಾಕ್ಸಿನ್ ಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದರು.
ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಮಾತನಾಡಿ, ಕೊರೊನಾ ಸಂದಿಗ್ಧ ಕಾಲದಲ್ಲಿ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ತರವಾದುದು. ಅವರ ಸೇವೆಯನ್ನು ಸಮಾಜ ಗುರುತಿಸಬೇಕು ಎಂದು ಹೇಳಿದರು.
ಹಿರಿಯ ಮುಖಂಡರಾದ ಟಿ.ಜಿ.ರಾಜಾರಾಮ ಭಟ್ ಮಾತನಾಡಿ, ಕೊರೊನಾ ಎರಡನೇ ಅಲೆ ಸಮಾಜದಲ್ಲಿ ಬಹಳಷ್ಟು ತೊಂದರೆಯನ್ನು ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಜನರೊಂದಿಗೆ ಬೆರೆತುಕೊಂಡು ಕೆಲಸ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ತರ ಎಂದರು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಅಲೆಮಾರಿ ಅರೆಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ
ಚಂದ್ರಹಾಸ್ ಪಂಡಿತ್ ಹೌಸ್, ಮುಖಂಡರಾದ ಈಶ್ವರ್ ಕಟೀಲ್, ಕ್ಯಾಂಪ್ಕೊ ನಿರ್ದೇಶಕ ಮಹೇಶ್ ಚೌಟ, ಕುರ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ದೇರಾಜೆ, ಸಜಿಪ ಪಡು ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ ಅಮೀನ್, ಜಯಂತ್ ಶೆಟ್ಟಿ ಕಂಬ್ಲಪದವು, ಗೋಪಾಲ್ ಬಂಗೇರ, ನಿತಿನ್ ಗಟ್ಟಿ ಕುರ್ನಾಡ್, ಶಿವಶಂಕರ್ ಭಟ್, ಜಯಂತ್ ಪಾದಲ್ಪಾಡಿ, ಬಿಜೆಪಿ ಮಂಗಳೂರು ಮಂಡಲ ಕಾರ್ಯದರ್ಶಿ ನವೀನ್ ಕುರ್ನಾಡು, ಬಿಜೆಪಿ ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ ಸುಜಿತ್ ಕಂಬ್ಲಪದವು, ಗಣೇಶ್ , ಶಶಿಧರ್ ಮೊದಲಾದವರು ಉಪಸ್ಥಿತರಿದ್ದರು.
India beats China at its own game in vaccine diplomacy battle said MLC Prathap Simha Nayak in Mangalore during a felicitation program held to Asha Workers in Ullal.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm