ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm