ಬ್ರೇಕಿಂಗ್ ನ್ಯೂಸ್
20-06-21 07:40 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ರಾಜ್ಯ ಸರಕಾರ ಅನ್ ಲಾಕ್ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದನ್ನು ಸ್ವಲ್ಪಮಟ್ಟಿಗೆ ಮಾರ್ಪಡಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಹೊಸ ಮಾರ್ಗದರ್ಶಿ ಪ್ರಕಾರ, ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಮಾತ್ರ ಅಗತ್ಯ ಸಾಮಗ್ರಿಗಳ ಅಂಗಡಿಗಳನ್ನು ತೆರೆದಿಡಲು ಅವಕಾಶ ನೀಡಲಾಗಿದೆ.
ಜೊತೆಗೆ, ವಾರಾಂತ್ಯದಲ್ಲಿ ಶುಕ್ರವಾರ ಸಂಜೆ ಏಳರಿಂದ ಸೋಮವಾರ ಬೆಳಗ್ಗೆ ಏಳು ಗಂಟೆ ವರೆಗೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಸಾಮಗ್ರಿ ಅಂಗಡಿ ತೆರೆದಿಡಬಹುದೇ ಎನ್ನುವ ಬಗ್ಗೆ ಜಿಲ್ಲಾಧಿಕಾರಿ ಮಾರ್ಗಸೂಚಿಯಲ್ಲಿ ಮಾಹಿತಿ ಇಲ್ಲ. ವೀಕೆಂಡ್ ಕರ್ಫ್ಯೂ ಪ್ರಕಾರ, ಈ ಅವಧಿಯಲ್ಲಿ ಎರಡು ದಿನ ಪೂರ್ತಿ ಬಂದ್ ಇರುತ್ತದೆ. ಇದಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಸಂಜೆ 7ರಿಂದ ಬೆಳಗ್ಗೆ 7ರ ವರೆಗೆ ನೈಟ್ ಕರ್ಫ್ಯೂವನ್ನು ಹೊಸತಾಗಿ ಹೇರಲಾಗಿದೆ.
ಇತರೇ ದಿನಗಳಲ್ಲಿ ತರಕಾರಿ, ದಿನಸಿ ಅಂಗಡಿಗಳು, ಮೀನು, ಮಾಂಸದ ಮಾರುಕಟ್ಟೆ, ಹಾಲಿನ ಡೈರಿಗಳು ಬೆಳಗ್ಗೆ ಏಳು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ಇರಲಿದೆ. ಅಲ್ಲದೆ, ಆಹಾರ ಉತ್ಪನ್ನಗಳ ತಯಾರಿಕಾ ಫ್ಯಾಕ್ಟರಿಗಳು, ಕೈಗಾರಿಕೆಗಳು 50 ಶೇ. ಸಿಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಇದರ ಜೊತೆಗೆ, ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪಡಿತರ ಅಂಗಡಿಗಳು, ಸ್ವತಂತ್ರ ಮದ್ಯದಂಗಡಿಗಳು, ಮದ್ಯದ ಮಳಿಗೆಗಳು ಬೆಳಗ್ಗೆ ಏಳರಿಂದ ಮಧ್ಯಾಹ್ನ ಒಂದು ಗಂಟೆಯ ವರೆಗೆ ತೆರೆದಿಡಬಹುದು. ಮದ್ಯ ಪಾರ್ಸೆಲ್ ಒಯ್ಯುವುದಕ್ಕೆ ಮಾತ್ರ ಅವಕಾಶ ಇರುತ್ತದೆ. ಸಿಮೆಂಟ್, ಸ್ಟೀಲ್ ಸೇರಿದಂತೆ ಕಟ್ಟಡ ನಿರ್ಮಾಣ ಸಂಬಂಧಿತ ಸಾಮಗ್ರಿಗಳ ಅಂಗಡಿಗಳು, ದುರಸ್ತಿ ಕಾರ್ಯ ನಿರ್ವಹಿಸುವ ಗ್ಯಾರೇಜ್ ಮತ್ತಿತರ ಶಾಪ್ ಗಳು, ಕನ್ನಡಕದ ಅಂಗಡಿಗಳನ್ನು ಮಧ್ಯಾಹ್ನ ವರೆಗೆ ತೆರೆದಿಡ ಬಹುದಾಗಿದೆ.
ಆಟೋ, ಟ್ಯಾಕ್ಸಿ ವಾಹನಗಳಿಗೆ ಇಬ್ಬರು ಪ್ರಯಾಣಿಕರನ್ನು ಕುಳ್ಳಿರಿಸಿ ಸಂಚರಿಸಲು ಅವಕಾಶ ನೀಡಲಾಗಿದೆ. ಯಾವುದೇ ರೀತಿಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿಲ್ಲ. ಹೊರ ಜಿಲ್ಲೆಗಳಿಂದ ಕೆಎಸ್ಸಾರ್ಟಿಸಿ ಮತ್ತಿತರ ಬಸ್ ಗಳ ಆಗಮನಕ್ಕೂ ಅವಕಾಶ ನೀಡಲಾಗಿಲ್ಲ. ಅಲ್ಲದೆ, ದ.ಕ. ಜಿಲ್ಲೆಯಲ್ಲಿ ಪಾರ್ಕ್ ಪ್ರವೇಶಕ್ಕೆ ಅನುಮತಿ ನೀಡಲಾಗಿಲ್ಲ. ಮಾರ್ಗಸೂಚಿ ಆದೇಶ ಜುಲೈ 5ರ ವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mangalore district administration on Sunday June 20 announced that beginning Monday June 21, shops selling essential items will remain open from 7 am to 1 pm.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm