ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm