ಮುಡಿಪು: ಸರ್ಕಾರಿ ಕಾಲೇಜಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಪಿಯು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

23-06-21 04:06 pm       Mangalore Correspondent   ಕರಾವಳಿ

ಕುರ್ನಾಡು ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಗಳನ್ನು ವಿತರಿಸಲಾಯಿತ್ತು

ಉಳ್ಳಾಲ, ಜೂ.23: ವಿದ್ಯಾರ್ಥಿಗಳು ಬಲಿಷ್ಠರಾದರೆ ಮಾತ್ರ ಈ ದೇಶ ಬಲಿಷ್ಠವಾಗುತ್ತದೆ ಹೊರತು ಮಂತ್ರಿಗಳು, ಸಂಸದರು, ಶಾಸಕರಿಂದ ಸಾಧ್ಯವಿಲ್ಲ. ಹಾಗಾಗಿ ಶಿಕ್ಷಣದಲ್ಲಿ ಸ್ಪರ್ಧೆಗೆ ಸರಕಾರ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತಿದ್ದು ಶಿಕ್ಷಣಕ್ಕೆ ಆದ್ಯತೆ ನೀಡುವುದೇ ಮುಖ್ಯ ಗುರಿ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. 

ಅವರು ಇಂದು ಕುರ್ನಾಡು ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕ್ಲಾಸ್ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಗಳನ್ನು ವಿತರಿಸಿ ಮಾತನಾಡಿದರು.

ಯಾವುದೇ ಅಭಿವೃದ್ಧಿಯಲ್ಲಿ ಕನಿಷ್ಟ ಮುಂದಿನ ಮೂವತ್ತು ವರ್ಷಗಳ ದೂರದೃಷ್ಟಿ ಇರಬೇಕು. ಇಲ್ಲಿ ಸುಂದರ ಪರಿಸರ, ಸುಂದರ ಕಟ್ಟಡ, ನುರಿತ ಉಪನ್ಯಾಸಕರು, ಸಿಬ್ಬಂದಿ ಎಲ್ಲ ಸೌಲಭ್ಯಗಳಿಂದ ಸುಸಜ್ಜಿತವಾಗಿದ್ದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಮುಂದೆ ಕಲಿಯಲು ಬರುವ ವಿದ್ಯಾರ್ಥಿಗಳಿಗೆ ಪೂರಕವಾಗಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಗಿರಿಧರ್ ರಾವ್ ಪ್ರಾಸ್ತಾವಿಕ ಮಾತುಗಳನ್ನಾಡಿ ಮುಡಿಪು ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡದ ಜೊತೆಗೆ ಸ್ಮಾರ್ಟ್ ಕ್ಲಾಸ್ ಯೋಜನೆಯಡಿ ಮೂರು ತರಗತಿ‌ ನಡೆಸಿಕೊಡಲು ಹಾಗೂ ಪ್ರಥಮ ಪದವಿಯ 93 ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ದೊರಕಿಸಿಕೊಟ್ಟಿರುವುದು ಶ್ಲಾಘನೀಯ. ವರ್ಷದ ಹಿಂದೆ ಒಂದು ತರಗತಿಯಲ್ಲಿದ್ದ ಕೆಲವು ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಟ್ಯಾಬ್ ಸಿಗುತ್ತಿದ್ದು , ಈಗ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ದೊರಕಿರುವುದು ತುಂಬ ಖುಷಿ ಕೊಟ್ಟಿದೆ ಎಂದು ಹೇಳಿದರು. 

ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಕಾಲೇಜು‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಕಾಜವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಕಾಲೇಜಿನ ಐಟಿ ಸಂಚಾಲಕ ಅಜಯ್, ಅಬ್ದುಲ್ ಜಲೀಲ್ ಮೋಂಟುಗೋಳಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Mudupi government school inaugurates Smart Class with tabs.