ಬ್ರೇಕಿಂಗ್ ನ್ಯೂಸ್
24-06-21 09:21 pm Mangaluru Correspondent ಕರಾವಳಿ
Photo credits : 6th Picture source: Deccan Herald
ಮಂಗಳೂರು, ಜೂನ್ 24: ಕೊರೊನಾ ನಿಯಂತ್ರಣಕ್ಕೆ ಹೇರಲಾಗಿರುವ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ಸಂಪೂರ್ಣ ಲಾಕ್‍ಡೌನ್ ಇರಲಿದ್ದು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೊನಾ ನಿಯಂತ್ರಣ ಕುರಿತು ಸಭೆ ನಡೆಸಿದರು.
ಜೂನ್ 25ರ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಹಾಲಿನ ವಿತರಣಾ ಕೇಂದ್ರಗಳು, ಆಸ್ಪತ್ರೆ, ಸರ್ಕಾರಿ ಕೆಲವು ಕಚೇರಿಗಳು ಮಾತ್ರ ತೆರೆಯಲು ಅವಕಾಶವಿದ್ದು, ಇತರೆ ಯಾವುದೇ ಚಟುವಟಿಕೆ ಇರುವುದಿಲ್ಲ. ವಾರಾಂತ್ಯದಲ್ಲಿ ಸರಕಾರಿ ಕಚೇರಿಗಳು ರಜೆ ಇರುವುದರಿಂದ ಜನರು ಅನಾವಶ್ಯಕ ಓಡಾಡುವುದು ಅವಶ್ಯವಿರುವುದಿಲ್ಲ. ಸಂಪೂರ್ಣ ಬಂದ್ ಮಾಡುವುದರಿಂದ ಕೊರೊನಾ ಹರಡುವಿಕೆ ಪ್ರಮಾಣವನ್ನು ಕಡಿಮೆ ಮಾಡಲು ಸಾದ್ಯ ಎಂದರು.
ಸರಕಾರಿ ಸೇರಿದಂತೆ ಇತರೆ ಖಾಸಗಿ ಕಟ್ಟಡ ಕಾಮಗಾರಿಗಳಿಗೆ ನಿರಂತರ ಚಾಲನೆಯಲ್ಲಿರುವ ಕಾರ್ಖಾನೆಗಳಿಗೆ, ಹೊಟೇಲ್‍ಗಳಲ್ಲಿ ಪಾರ್ಸೆಲ್ ಕೊಡಲು ಮಾತ್ರ ಅವಕಾಶವಿರುತ್ತದೆ. ಪೂರ್ವ ನಿಗದಿತ ಅನುಮತಿ ಪಡೆದ ಮದುವೆ ಮತ್ತಿತರ ಸಮಾರಂಭಗಳಿಗೆ 25 ಜನರಿಗೆ ಸೀಮಿತಗೊಳಿಸಿ ಮನೆಗಳಲ್ಲಿ ಮಾತ್ರ ಮಾಡಿಕೊಳ್ಳಲು ಅವಕಾಶ ಇದೆ ಎಂದು ಹೇಳಿದರು.
ಕ್ಲಿನಿಕ್‍ಗಳಲ್ಲಿ ಕೆಮ್ಮು, ಶೀತ, ಜ್ವರ ಬಂದವರಿಗೆ ಚಿಕಿತ್ಸೆಯನ್ನು ವೈದ್ಯರುಗಳು ನೀಡುತ್ತಿದ್ದಾರೆ. ಅಂತಹ ರೋಗಿಗಳ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಮಾಡಲೇಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ವೈದ್ಯಕೀಯ ಸಿಬ್ಬಂದಿ ವರ್ಗದವರು, ಕೊರೊನಾ ಪೂರ್ಣ ಪ್ರಮಾಣವಾಗಿ ಮುಕ್ತವಾಗಿದೆ ಎಂಬ ಮನೋಭಾವ ಹೊಂದಬಾರದು. ಸ್ಥಳೀಯವಾಗಿ ಸೋಂಕಿತರನ್ನು ತಮ್ಮ ಮನೆಯವರ ಬಗ್ಗೆ ತೆಗೆದುಕೊಳ್ಳುವಷ್ಟೆ ಕಾಳಜಿಯನ್ನು ಅವರಿಗೂ ತೆಗೆದುಕೊಳ್ಳಬೇಕು. ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ವರ್ಗಾಯಿಸಬೇಕು ಎಂದರು.
ಸರ್ಕಾರದಿಂದ ಬರುವ ಕೊರೊನಾ ಲಸಿಕೆ ದಾಸ್ತಾನನ್ನು ಆಯಾ ದಿನವೇ ಪೂರ್ಣ ಪ್ರಮಾಣದಲ್ಲಿ ನೀಡಲು ಯೋಜನೆಯನ್ನು ರೂಪಿಸುವುದರೊಂದಿಗೆ ಜನರಿಗೆ ನೀಡುವ ಕೆಲಸವಾಗಬೇಕು. ಈ ಕಾರ್ಯಕ್ಕೆ ನಿವೃತ್ತ ವೈದ್ಯರನ್ನು ಬಳಸಿಕೊಳ್ಳುವುದು ಸೂಕ್ತ ಎಂದರು.
3ನೇ ಅಲೆಯಲ್ಲಿ ಮಕ್ಕಳನ್ನು ಸೋಂಕು ಬಾಧಿಸುವ ಸಂಭವವಿದೆ ಎಂಬುದರ ಬಗ್ಗೆ ಕೇಳಿಬರುತ್ತಿದೆ. ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದ ಅವರು ಅಂಗಡಿ ಮುಗ್ಗಟ್ಟುಗಳಲ್ಲಿ ಮಕ್ಕಳು ಇರದೇ ಇರುವ ರೀತಿ ಮಾಲೀಕರು ನೋಡಿಕೊಳ್ಳಬೇಕು. ಒಂದೊಮ್ಮೆ ಇದನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ದಂಡ ವಿಧಿಸಲಾಗುವುದು ಎಂದರು.
ಉಪವಿಭಾಗ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಕೊರೋನಾ ನಿಯಂತ್ರಣಾ ಕ್ರಮಗಳ ಬಗ್ಗೆ ಮೇಲುಸ್ತುವಾರಿ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಹಶಿಲ್ದಾರುಗಳು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರತಿದಿನ ತಮ್ಮ ಕೆಳಗಿನ ಅಧಿಕಾರಿ ಸಿಬ್ಬಂದಿಗಳೊಂದಿಗೆ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸಭೆ ನಡೆಸಿ ಮಾಹಿತಿ ಪಡೆಯಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಧಿಕಾರಿ ಡಾ.ಕುಮಾರ್ ಮಾತನಾಡಿ, ತಾಲೂಕುಗಳಿಗೆ ಪ್ರತಿದಿನ ನಿಗದಿ ಪಡಿಸಿರುವ ಕೋವಿಡ್ ಪರೀಕ್ಷೆಯ ಗುರಿಯನ್ನು ಸಾಧಿಸಬೇಕು. ಜಿಲ್ಲೆಯಲ್ಲಿ ಸುಳ್ಯ ತಾಲೂಕನ್ನು ಹೊರತುಪಡಿಸಿದರೆ ಇತರ ತಾಲೂಕುಗಳಲ್ಲಿ ನಿಗದಿತ ಗುರಿ ಮುಟ್ಟುತ್ತಿಲ್ಲ. ಹೀಗಾಗದಂತೆ ಮುಂದಿನ ದಿನಗಳಲ್ಲಿ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಾನೆ, ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕಿಶೋರ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Strict Weekend Curfew on Saturday and Sunday imposed in Mangalore, Dakshina Kannada. The Curfew will be imposed from Friday at 7:00 PM to Monday at 6:00 Am. DC has warned that strict action will be taken against those who violate the rules.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm