ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm