ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.
ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm