ಬ್ರೇಕಿಂಗ್ ನ್ಯೂಸ್
28-06-21 07:52 pm Mangaluru Correspondent ಕರಾವಳಿ
ಮಂಗಳೂರು, ಜೂನ್ 28: ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಒಟ್ಟಾಗಿಯೇ ಇದ್ದಾರೆ. ಅವರ ನಡುವೆ ಒಡಕು ಮುಡಿಸಲು ಬಿಜೆಪಿ ನಾಯಕರು ಯತ್ನಿಸುತ್ತಿದ್ದಾರೆ. ಬಿಜೆಪಿ ನಾಯಕರ ಈ ಪ್ರಯತ್ನ ಫಲಿಸುವುದಿಲ್ಲ. ಕಾಂಗ್ರೆಸ್ ಮುಖಂಡರನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖಾದರ್, ಕಾಂಗ್ರೆಸ್ ಪಕ್ಷದ ನಾಯಕರೂ ಒಟ್ಟಾಗಿಯೇ ಇದ್ದಾರೆ. ಜನ ಸಾಮಾನ್ಯರಿಗೆ ಪ್ರಯೋಜನ ಆಗುವಂತಹ ಕೆಲಸ ಮಾಡಬೇಕು ಎನ್ನುವುದ ನಮ್ಮ ಉದ್ದೇಶ. ಆದರೆ, ನಮ್ಮ ನಾಯಕರ ಬಗ್ಗೆ ಬಿಜೆಪಿಯವರು ಮಾತನಾಡಲು ಆರಂಭಿಸಿದ್ದು ನೋಡಿದರೆ, ಇವರಿಗೆ ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದು ಈಗಲೇ ಗೊತ್ತಾದಂತಿದೆ. ರಾಜ್ಯದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದಾರೆ ಎಂಬ ಜನರ ನಾಡಿ ಮಿಡಿತವನ್ನು ಬಿಜೆಪಿ ಮುಖಂಡರು ಅರ್ಥ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇದರ ಅರ್ಥ ಬಿಜೆಪಿ ನಾಯಕರು ಈಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ರಾಜ್ಯ ಸರಕಾರದ ಬೇಜವಾಬ್ದಾರಿ ಆಡಳಿತದಿಂದಾಗಿ ಬಿಜೆಪಿ ಮುಖಂಡರೇ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ವೈಫಲ್ಯ ಜನರು ಕೇಳೋದು ಬೇಡ ಎಂದು ಡಿಕೆಶಿ, ಸಿದ್ದರಾಮಯ್ಯ ಬಗ್ಗೆ ಹೇಳುತ್ತಿದ್ದಾರೆ. ಆದರೆ, ಈ ರೀತಿಯ ಹೇಳಿಕೆಗಳಿಂದ ನಮ್ಮ ನಾಯಕರ ನಡುವೆ ಒಡಕು ಮೂಡಿಸಲು ಸಾಧ್ಯವಿಲ್ಲ ಎಂದು ಖಾದರ್ ಹೇಳಿದ್ದಾರೆ.
ಕನ್ನಡದ ಹೆಸರು ಬದಲಿಸುವುದನ್ನು ಒಪ್ಪಲ್ಲ:
ಕಾಸರಗೋಡಿನಲ್ಲಿ ಕನ್ನಡದ ಹೆಸರುಗಳನ್ನು ಬದಲಿಸುವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಖಾದರ್, ಕರ್ನಾಟಕ - ಕೇರಳ ಗಡಿಭಾಗ ಸರ್ವೆಯಲ್ಲಿ ಮಾತ್ರ ಬೇರೆ ಬೇರೆ. ಜನರು ಎರಡೂ ಕಡೆ ಒಂದೇ ರೀತಿ ಇದ್ದಾರೆ. ಗಡಿನಾಡ ಪ್ರದೇಶದ ಜನರಿಗೆ ಯಾವುದೇ ಕಾರಣಕ್ಕೂ ಧಕ್ಕೆ ಆಗುವ ರೀತಿ ಸರಕಾರ ನಡೆದುಕೊಳ್ಳಬಾರದು. ಅಂತಹ ಪ್ರಸ್ತಾವನೆ ಇರುವುದು ನಮ್ಮ ಗಮನಕ್ಕೆ ಬಂದಿಲ್ಲ. ಯಾವುದೇ ಕಾರಣಕ್ಕೂ ನಾವು ಇದನ್ನು ಒಪ್ಪುವುದಿಲ್ಲ. ಮಂಜೆಶ್ವರದ ಶಾಸಕರು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಗಡಿನಾಡಿನ ಕನ್ನಡಿಗರಿಗೆ ಗೌರವ ಸಲ್ಲಿಸಿದ್ದರು. ಕನ್ನಡದ ನಾಮಫಲಕ ಬದಲಿಸುವ ಕೆಲಸಕ್ಕೆ ಅಲ್ಲಿಯ ಶಾಸಕರು ಕೂಡ ಒಪ್ಪುವುದಿಲ್ಲ ಎಂದು ಹೇಳಿದರು.
People are tired of BJP’s administration. The overall development suggests that Congress will come back to power. It is impossible for BJP to create differences among Congress leaders as we all are united said MLA U T Khader in Mangalore.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm